ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದ ಪಿಟ್ಸ್‌ಬರ್ಗ್‌ನ ಪಾರ್ಟಿಯಲ್ಲಿ ಗುಂಡಿನ ದಾಳಿ: ಇಬ್ಬರ ಸಾವು, 8 ಮಂದಿ ಗಾಯ

Last Updated 18 ಏಪ್ರಿಲ್ 2022, 4:19 IST
ಅಕ್ಷರ ಗಾತ್ರ

ವಾಷಿಂಗ್ಟನ್: ಅಮೆರಿಕದ ಪೆನ್ಸಿಲ್ವೇನಿಯಾದ ಪ್ರಮುಖ ನಗರವಾದ ಪಿಟ್ಸ್‌ಬರ್ಗ್‌ನ ಪಾರ್ಟಿಯೊಂದರಲ್ಲಿ ಗುಂಡು ಹಾರಿಸಲಾಗಿದ್ದು, ಇಬ್ಬರು ಅಪ್ರಾಪ್ತರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ.

ಮಧ್ಯರಾತ್ರಿ ಮನೆಯೊಂದರಲ್ಲಿ ನಡೆಯುತ್ತಿದ್ದ ಸುಮಾರು 200 ಜನರು ಹಾಜರಿದ್ದ ಪಾರ್ಟಿಯ ಸಮಯದಲ್ಲಿ ಗುಂಡಿನ ದಾಳಿ ನಡೆದಿದೆ. ಪಾರ್ಟಿಯಲ್ಲಿದ್ದವರ ಪೈಕಿ ಹಲವರು ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಅಪ್ರಾಪ್ತರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಇನ್ನೂ ಎಂಟು ಜನರು ಗುಂಡೇಟಿನ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

50 ಸುತ್ತು ಗುಂಡು ಹಾರಿಸಿರುವುದಾಗಿಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾರ್ಟಿಯಲ್ಲಿ ಇದ್ದ ಕೆಲವರು ಕಿಟಕಿಗಳಿಂದ ಹೊರಗೆ ಜಿಗಿದಿದ್ದಾರೆ. ಮನೆಯ ಹೊರಗಡೆಯೂ ಹಲವರ ಮೇಲೆ ಗುಂಡು ಹಾರಿಸಲಾಗಿದೆ ಎಂದು ತಿಳಿದುಬಂದಿದೆ.

‘ಗುಂಡಿನ ದಾಳಿಯು ಅಮೆರಿಕದಲ್ಲಿ ಪ್ರತಿದಿನ ನಡೆಯುವ ವಿಷಯವಾಗಿದೆ’ಎಂದು ವಕೀಲ ಆಂಡ್ರ್ಯೂ ವೈನ್‌ಸ್ಟೈನ್ ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಕರೊಲಿನಾ ರಾಜ್ಯದಲ್ಲಿ, ಶನಿವಾರ ಮಧ್ಯಾಹ್ನ ಮತ್ತು ಭಾನುವಾರದಂದು ಎರಡು ಪ್ರತ್ಯೇಕ ಗುಂಡಿನ ದಾಳಿಗಳು ನಡೆದಿದ್ದು, ಒಟ್ಟು 23 ಜನರು ಗಾಯಗೊಂಡಿದ್ದರು.

ನ್ಯೂಯಾರ್ಕ್ ರಾಜ್ಯದ ಸಿರಾಕ್ಯೂಸ್‌ನ ವಾಣಿಜ್ಯ ಪ್ರದೇಶದಲ್ಲಿ ಶನಿವಾರ ಮುಂಜಾನೆ ಐದು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಘಟನೆಯು ಸಮುದಾಯದ ಜನರನ್ನು ಬೆಚ್ಚಿಬೀಳಿಸಿದೆ ಎಂದು ಸಿರಾಕ್ಯೂಸ್ ಮೇಯರ್ ಬೆನ್ ವಾಲ್ಷ್ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT