ನ್ಯೂಜಿಲೆಂಡ್: ಬೀಚ್‌ನಲ್ಲಿ ಮುಳುಗಿ ಇಬ್ಬರು ಭಾರತೀಯರ ಸಾವು

ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ ಪಿಹಾ ಬೀಚ್‌ನಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ಮುಳುಗಿ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
‘ಮೃತರನ್ನು ಸೌರಿನ್ ನಯನ್‌ಕುಮಾರ್ ಪಟೇಲ್ (28) ಮತ್ತು ಅನ್ಶೌಲ್ ಶಾ (31) ಎಂದು ಗುರುತಿಸಲಾಗಿದೆ. ಇವರು ಗುಜರಾತ್‌ನ ಅಹಮದಾಬಾದ್ ಮೂಲದವರಾಗಿದ್ದು, ಆಕ್ಲೆಂಡ್‌ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು’ ಎಂದು ವರದಿ ಮಾಡಿದೆ.
ಎಲೆಕ್ಟ್ರಾನಿಕ್ ಎಂಜಿನಿಯರ್ ಆಗಿದ್ದ ಪಟೇಲ್ ಕಳೆದ ವರ್ಷ ಆಗಸ್ಟ್‌ನಲ್ಲಿ ನ್ಯೂಜಿಲೆಂಡ್‌ಗೆ ತೆರಳಿದ್ದರು. ಶಾ, ಅನಿಲ ಕೇಂದ್ರದಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.