ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

Last Updated 30 ಮೇ 2022, 13:21 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಜೈಷ್‌–ಎ–ಮಹಮ್ಮದ್‌ ಉಗ್ರ ಸಂಘಟನೆಯ ಇಬ್ಬರು ಶಂಕಿತ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪುಲ್ವಾಮಾದ ಗುಂಡಿಪೊರಾ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಶಂಕಿತ ಉಗ್ರರು ಹತರಾಗಿದ್ದಾರೆ. ಘಟನಾ ಸ್ಥಳದಿಂದ ಎರಡು ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ವಕ್ತಾರರೊಬ್ಬರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಶ್ಮೀರ ವಲಯ ಪೊಲೀಸ್ ಮಹಾನಿರ್ದೇಶಕ ವಿಜಯ್‌ ಕುಮಾರ್‌, ‘ ಮೇ 13ರಂದು ಕಾನ್‌ಸ್ಟೆಬಲ್‌ ರಿಯಾಜ್‌ ಅಹ್ಮದ್‌ ಕೊಂದಿದ್ದ ವ್ಯಕ್ತಿ ಸೇರಿದಂತೆ ಜೈಷ್‌–ಎ–ಮಹಮ್ಮದ್‌ ಸಂಘಟನೆಯಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT