ಬ್ರಿಟನ್‌ನಲ್ಲಿ ಫೈಝರ್–ಬಯೋಎನ್‌ಟೆಕ್ 'ಕೋವಿಡ್ ಲಸಿಕೆ' ಬಳಕೆಗೆ ಅನುಮತಿ

ಲಂಡನ್: ಫೈಝರ್–ಬಯೋಎನ್‌ಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಿಡ್–19 ಲಸಿಕೆಯ ಬಳಕೆಗೆ ಬ್ರಿಟನ್ ಸರ್ಕಾರ ಬುಧವಾರ ಅನುಮೋದನೆ ನೀಡಿದೆ.
ಮುಂದಿನ ವಾರ ದೇಶದಾದ್ಯಂತ ಈ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಕಾರ್ಯದರ್ಶಿ ಮ್ಯಾಟ್ ಹನ್‌ಕಾಕ್ ತಿಳಿಸಿದ್ದಾರೆ.
ಲಸಿಕೆಯ ಬಳಕೆಗೆ ಹಸಿರು ನಿಶಾನೆ ತೋರಿದ ಜಗತ್ತಿನ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೂ ಬ್ರಿಟನ್ ಪಾತ್ರವಾಗಿದೆ.
‘ಫೈಝರ್–ಬಯೋಎನ್‌ಟೆಕ್‌ನ ಲಸಿಕೆಗೆ ಅನುಮೋದನೆ ನೀಡುವಂತೆ ಮೆಡಿಸಿನ್ಸ್ ಆ್ಯಂಡ್ ಹೆಲ್ತ್‌ಕೇರ್ ಪ್ರಾಡಕ್ಟ್ಸ್ ರೆಗ್ಯುಲೇಟರಿ ಏಜೆನ್ಸಿ (ಎಂಎಚ್‌ಆರ್‌ಎ) ಮಾಡಿದ್ದ ಶಿಫಾರಸನ್ನು ಸರ್ಕಾರ ಒಪ್ಪಿಕೊಂಡು, ಈ ಕ್ರಮ ಕೈಗೊಂಡಿದೆ’ ಎಂದು ಹನ್‌ಕಾಕ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.