ಮಂಗಳವಾರ, ಫೆಬ್ರವರಿ 7, 2023
27 °C

ಗೃಹ ಸಚಿವೆ ಸುಯೆಲ್ಲಾ ಬ್ರೇವರ್‌ಮನ್‌ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಬ್ರಿಟನ್‌ ನೂತನ ಪ್ರಧಾನಿ ಲಿಜ್‌ ಟ್ರಸ್‌ ಅವರು ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಅವರ ಸರ್ಕಾರದಿಂದ ಒಬ್ಬೊಬ್ಬರೇ ಹೊರ ನಡೆಯುತ್ತಿರುವ ಬೆಳವಣಿಗೆ ಶುರುವಾಗಿದ್ದು, ಬುಧವಾರ ಗೃಹ ಸಚಿವೆ, ಭಾರತೀಯ ಮೂಲದ ಸುಯೆಲ್ಲಾ ಬ್ರೇವರ್‌ಮನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ತಮ್ಮ ಬಲಪಂಥೀಯ ಆರ್ಥಿಕತೆಯ ಕಾರ್ಯಸೂಚಿಯಿಂದ ಪ್ರಧಾನಿ ಟ್ರಸ್‌ ಹಿಂದೆ ಸರಿಯುತ್ತಿದ್ದಂತೆಯೇ ಅವರೂ ಈ ಹುದ್ದೆಯಲ್ಲಿ ಹೆಚ್ಚುಕಾಲ ಮುಂದುವರಿಯುವುದು ಅನುಮಾನ ಎಂದು ಹೇಳಲಾಗುತ್ತಿದೆ. ಈಗಾಗಲೇ ಟೋರಿಯ ಐವರು ಸಂಸದರು ಲಿಜ್‌ ಟ್ರಸ್‌ ಅವರನ್ನು ಪ್ರಧಾನಿ ಸ್ಥಾನದಿಂದ ಬದಲಾಯಿಸುವಂತೆ ಬಹಿರಂಗವಾಗಿ ಒತ್ತಾಯಿಸಿದ್ದಾರೆ.

ಇತ್ತೀಚೆಗಷ್ಟೇ ಹಣಕಾಸು ಸಚಿವ ಸ್ಥಾನಕ್ಕೆ ಕ್ವಾಸಿ ಕ್ವಾರ್ಟೆಂಗ್‌ ಅವರು ರಾಜೀನಾಮೆ ಸಲ್ಲಿಸಿದ್ದರು. ಅವರ ಸ್ಥಾನಕ್ಕೆ ಜೆರೆಮಿ ಹಂಟ್‌ ಅವರನ್ನು ಲಿಜ್‌ ನೇಮಿಸಿದರು. ಲಿಜ್‌ ಅವರಿಗೆ ಮುಖಭಂಗವಾಗುವ ರೀತಿ, ಅವರ ಚುನಾವಣಾ ಪ್ರಣಾಳಿಕೆಯ ಭರವಸೆಗೆ ವಿರುದ್ಧವಾಗಿ ಹಂಟ್‌ ಅವರು ಸಾಲ ಮತ್ತು ತೆರಿಗೆ ಕಡಿತದ ನಿರ್ಧಾರ ಹಿಂಪಡೆದಿದ್ದರು.  

ಲಿಜ್‌ ಅವರು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಹುಸಿಗೊಳಿಸಿದ್ದಾರೆಂದು ಗೃಹ ಸಚಿವೆ ಸುಯೆಲ್ಲಾ ಬ್ರೇವರ್‌ಮನ್‌ ಅಸಮಾಧಾನ ವ್ಯಕ್ತಪಡಿಸಿ, ಲಿಜ್‌ ಅವರಿಗೆ ಇಮೇಲ್‌ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು