ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರವ್‌ ಮೋದಿ ಹಸ್ತಾಂತರ ಅರ್ಜಿ: ತೀರ್ಪು ಕಾಯ್ದಿರಿಸಿದ ಲಂಡನ್‌ ಕೋರ್ಟ್‌

Last Updated 12 ಅಕ್ಟೋಬರ್ 2022, 16:09 IST
ಅಕ್ಷರ ಗಾತ್ರ

ಲಂಡನ್‌: ಬ್ಯಾಂಕ್‌ಗೆ ವಂಚಿಸಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತಿಸುವ ಆದೇಶದ ವಿರುದ್ಧದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಬ್ರಿಟನ್‌ ಹೈಕೋರ್ಟ್‌ ಬುಧವಾರ ತೀರ್ಪು ಕಾಯ್ದಿರಿಸಿದೆ.

ಖಿನ್ನತೆಯಿಂದ ಬಳಲುತ್ತಿರುವ ನೀರವ್‌ ಮೋದಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಅಪಾಯ ಹೆಚ್ಚಿರುವುದರಿಂದ ಕಾನೂನು ಪ್ರಕ್ರಿಯೆ ಜಾರಿಗೊಳಿಸಲು ಭಾರತಕ್ಕೆ ಅವರನ್ನು ಹಸ್ತಾಂತರಿಸಬಾರದೆಂದು ನೀರವ್‌ ಪರ ವಕೀಲರು ವಾದಿಸಿದರು. ವಾದ ಪ್ರತಿವಾದ ಆಲಿಸಿದ ಇಬ್ಬರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು, ಆದಷ್ಟು ಶೀಘ್ರತೀರ್ಪು ಪ್ರಕಟಿಸುವುದಾಗಿ ಹೇಳಿತು.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ₹13,000 ಕೋಟಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿನೀರವ್‌ಮೋದಿ, ಸದ್ಯ ಲಂಡನ್‌ನ ವಾಂಡ್ಸ್‌ವರ್ಥ್‌ ಜೈಲಿನಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT