ಮಂಗಳವಾರ, ಮೇ 11, 2021
26 °C

ನೀರವ್ ಮೋದಿ ಗಡೀಪಾರಿಗೆ ಯುಕೆ ಸಮ್ಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ (ಪಿಎನ್‌ಬಿ) ₹ 13,500 ಕೋಟಿ ವಂಚಿಸಿರುವ ಆರೋಪ ಎದುರಿಸುತ್ತಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಯುನೈಟೆಡ್ ಕಿಂಗ್‌ಡಮ್ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅನುಮೋದನೆ ನೀಡಿದ್ದಾರೆ ಎಂದು ಸಿಬಿಐ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

50 ರ ಹರೆಯದ ನೀರವ್ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಲ್ಲಿ ಒಂದು ಹೆಜ್ಜೆ ಇಟ್ಟಂತಾಗಿದ್ದರೂ ಸಹ ಈ ಆದೇಶ ಪ್ರಶ್ನಿಸಿ 28 ದಿನಗಳ ಒಳಗೆ ಯುಕೆ ಹೈ‌ಕೋರ್ಟ್ ಮೊರೆ ಹೋಗುವ ಅವಕಾಶವಿದೆ. 2019 ರ ಫೆಬ್ರವರಿಯಲ್ಲಿ ಹಸ್ತಾಂತರ ಆದೇಶಕ್ಕೆ ಸಹಿ ಆದ ಬಳಿಕವೂ ನ್ಯಾಯಾಲಯದ ಮೊರೆ ಹೋದ ಉದ್ಯಮಿ ವಿಜಯ್ ಮಲ್ಯ ಹಸ್ತಾಂತರ ಪ್ರಕ್ರಿಯೆಗೆ ತಡೆ ತಂದಿದ್ದರು. ಅದೇ ರೀತಿ, ನೀರವ್ ಮೋದಿ ಪ್ರಕರಣದಲ್ಲಿ ಹಸ್ತಾಂತರ ಪ್ರಕ್ರಿಯೆಯು ತಿಂಗಳುಗಳು ಅಥವಾ ವರ್ಷಗಳು ತೆಗೆದುಕೊಳ್ಳಬಹುದು ಎಂದು ಹೇಳಲಾಗುತ್ತಿದೆ.

ಈ ಹಿಂದೆ, ನೀರವ್ ಮೋದಿ ಹಸ್ತಾಂತರಕ್ಕೆ ಸಮ್ಮತಿ ಸೂಚಿಸಿದ್ದ ಲಂಡನ್ನಿನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯವು ಪ್ರಕರಣವನ್ನು ಗೃಹ ಕಾರ್ಯದರ್ಶಿಗೆ ವರ್ಗಾಯಿಸಿತ್ತು.

ಭಾರತಕ್ಕೆ ನೀರವ್ ಮೋದಿ ಹಸ್ತಾಂತರ ಮನವಿ ವಿಚಾರಣೆ ವೇಳೆ, ಕೊರೊನಾ ಸಾಂಕ್ರಾಮಿಕ ಸೋಂಕಿನ ಸಂದರ್ಭ ಮತ್ತು ಭಾರತೀಯ ಜೈಲುಗಳಲ್ಲಿ ನೀರವ್ ಮೋದಿಯವರ ಮಾನಸಿಕ ಆರೋಗ್ಯ ಹಾಳಾಗುತ್ತದೆ ಎಂಬ ವಾದವನ್ನು ನ್ಯಾಯಾಧೀಶರು ತಳ್ಳಿ ಹಾಕಿದ್ದರು.

‘ನೀರವ್ ಮೋದಿಯವರು ನ್ಯಾಯಸಮ್ಮತ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆಂದು ನಾನು ಒಪ್ಪುವುದಿಲ್ಲ. ಇಲ್ಲಿ ಒಂದೇ ಒಂದು ನ್ಯಾಯಯುತ ವಹಿವಾಟುಗಳಿಲ್ಲ. ಅಕ್ರಮ ಪ್ರಕ್ರಿಯೆ ಇದೆ ಎಂದು ನಾನು ನಂಬುತ್ತೇನೆ’ ಎಂದು ನ್ಯಾಯಾಧೀಶರು ಹೇಳಿದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು