ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್‌: ಡಿ.2 ರಂದು ರಾಷ್ಟ್ರವ್ಯಾಪ್ತಿ ಲಾಕ್‌ಡೌನ್‌ ತೆರವುಗೊಳಿಸಲು ಚಿಂತನೆ

Last Updated 22 ನವೆಂಬರ್ 2020, 7:54 IST
ಅಕ್ಷರ ಗಾತ್ರ

ಲಂಡನ್‌: ಕೊರೊನಾ ಸೋಂಕು ನಿಯಂತ್ರಿಸಲು ಹೇರಲಾಗಿದ್ದ ಲಾಕ್‌ಡೌನ್‌ ಅನ್ನು ನಿಗದಿಯಂತೆ ಡಿಸೆಂಬರ್‌ 2 ರಂದು ತೆರವುಗೊಳಿಸಲು ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಮುಂದಾಗಿದ್ದಾರೆ.

ಬ್ರಿಟನ್‌ನಲ್ಲಿ ಕೊರೊನಾ ಪ್ರಕರಣಗಳಲ್ಲಿ ಸ್ಥಿರತೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ದೇಶವ್ಯಾಪ್ತಿ ಲಾಕ್‌ಡೌನ್‌ ತೆರವುಗೊಳಿಸಿ, ಪ್ರಾದೇಶಿಕ ನಿರ್ಬಂಧಗಳನ್ನು ಹೇರಲು ಚಿಂತನೆ ನಡೆಸಲಾಗಿದೆ.

ಇಂಗ್ಲೆಂಡ್‌ನಲ್ಲಿ ಮೂರು ಹಂತದ ಸ್ಥಳೀಯ ನಿರ್ಬಂಧಗಳನ್ನು ಅಳವಡಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಆ ಪ್ರದೇಶದ ಕೊರೊನಾ ಪರಿಸ್ಥಿತಿಗೆ ಅನುಗುಣವಾಗಿ ನಿರ್ಬಂಧಗಳನ್ನು ನಿರ್ಧರಿಸಲಾಗುವುದು ಎಂದು ಜಾನ್ಸನ್‌ ಅವರ ಕಚೇರಿಯು ಶನಿವಾರ ತಿಳಿಸಿದೆ.

‘ಬ್ರಿಟನ್‌ನಲ್ಲಿ ನ.5 ರಂದು ನಾಲ್ಕು ವಾರಗಳ ಲಾಕ್‌ಡೌನ್‌ ಹೇರಿತ್ತು. ಈ ಬಗ್ಗೆ ‍ಪ್ರಧಾನಿ ಬೋರಿಸ್‌ ಅವರು ಭಾನುವಾರ ಕ್ಯಾಬಿನೆಟ್‌ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದು, ಸೋಮವಾರ ಸಂಸತ್ತಿನಲ್ಲಿ ಯೋಜನೆ ಸಂಬಂಧಿತ ಮಾಹಿತಿಯನ್ನು ನೀಡಲಿದ್ದಾರೆ’ ಎಂದು ಪ್ರಧಾನಿ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಒಂದು ವೇಳೆ ಕೋವಿಡ್‌ ಲಸಿಕೆಗೆ ಅನುಮೋದನೆ ಸಿಕ್ಕಿದರೆ, ಮುಂದಿನ ತಿಂಗಳಿನಿಂದಲೇ ರಾಷ್ಟ್ರವ್ಯಾಪ್ತಿ ಕೋವಿಡ್‌ ಲಸಿಕೆ ಕಾರ್ಯಕ್ರಮವನ್ನು ನಡೆಸಲಾಗುವುದು. ಅಲ್ಲದೆ ಹೆಚ್ಚಿನ ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಪ್ರಕಟಣೆ ಹೇಳಿದೆ.

ಇಂಗ್ಲೆಂಡ್‌ನಲ್ಲಿಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಏಳು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಶೇ 13.8 ರಷ್ಟು ಕುಸಿದಿದೆ.

‘ಲಾಕ್‌ಡೌನ್‌ನಿಂದಾಗಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿದೆ. ಹಾಗಾಗಿ ಮುಂದಿನ ದಿನಗಳಲ್ಲೂ ಜನರು ನಿಯಮಗಳನ್ನು ಪಾಲಿಸಬೇಕು’ ಎಂದು ಆರೋಗ್ಯ ಕಾರ್ಯದರ್ಶಿ ಮ್ಯಾಟ್ ಹ್ಯಾನ್ಕಾಕ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT