ಗುರುವಾರ , ಮಾರ್ಚ್ 23, 2023
22 °C

ಬ್ರಿಟನ್‌ನಲ್ಲಿ ಗಾಂಧಿ ಸ್ಮರಣಾರ್ಥ 5 ಪೌಂಡ್‌ಗಳ ಹೊಸ ನಾಣ್ಯ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಂಡನ್: ಮಹಾತ್ಮ ಗಾಂಧಿ ಸ್ಮರಣಾರ್ಥ ಅವರ ಜೀವನ ಮತ್ತು ಪರಂಪರೆ ಕೊಂಡಾಡುವ 5 ಪೌಂಡ್‌ನ ಹೊಸ ನಾಣ್ಯವನ್ನು ದೀಪಾವಳಿ ಹಬ್ಬದ ಅಂಗವಾಗಿ ಗುರುವಾರ ಬ್ರಿಟನ್‌ ಹಣಕಾಸು ಸಚಿವ ರಿಷಿ ಸುನಕ್ ಅವರು ಅನಾವರಣಗೊಳಿಸಿದರು.

ಚಿನ್ನ ಮತ್ತು ಬೆಳ್ಳಿ ಸೇರಿದಂತೆ ಹಲವು ಮಾನದಂಡಗಳಲ್ಲಿ ಈ ನಾಣ್ಯ ಲಭ್ಯವಿದೆ. ಸಂಗ್ರಹ ಯೋಗ್ಯವಾದ ಈ ನಾಣ್ಯವನ್ನು ಹೀನಾ ಗ್ಲೋವರ್ ವಿನ್ಯಾಸಗೊಳಿಸಿದ್ದಾರೆ. ಗಾಂಧಿಯವರ ಅತ್ಯಂತ ಪ್ರಸಿದ್ಧ ಉಲ್ಲೇಖಗಳಲ್ಲಿ ಒಂದಾದ ‘ಮೈ ಲೈಫ್ ಈಸ್ ಮೈ ಮೆಸೇಜ್’ ಜೊತೆಗೆ ಭಾರತದ ರಾಷ್ಟ್ರೀಯ ಹೂವು ಕಮಲದ ಚಿತ್ರವನ್ನು ಒಳಗೊಂಡಿದೆ.

‘ಈ ನಾಣ್ಯವು ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದ ಪ್ರಭಾವಿ ನಾಯಕನಿಗೆ ಸೂಕ್ತವಾದ ಗೌರವವಾಗಿದೆ’ ಎಂದು ಸುನಕ್ ಹೇಳಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು