ಸೋಮವಾರ, ಮಾರ್ಚ್ 27, 2023
32 °C

ರಷ್ಯಾದ ತೈಲ, ಅನಿಲ ಅವಲಂಬನೆಯಿಂದ ಹೊರಬನ್ನಿ: ವಿಶ್ವಕ್ಕೆ ಇಂಗ್ಲೆಂಡ್‌ ಕರೆ

ಪಿಟಿಐ Updated:

ಅಕ್ಷರ ಗಾತ್ರ : | |

ಲಂಡನ್‌: ರಷ್ಯಾ ವಿರುದ್ಧ ಅಂತರರಾಷ್ಟ್ರೀಯ ಮಟ್ಟದ ಕೂಟವನ್ನು ರಚಿಸಲು ಮುಂದಾಗಿರುವ ಇಂಗ್ಲೆಂಡ್‌ ಪ್ರಧಾನಿ ಬೋರಿಸ್‌ ಜಾನ್ಸನ್‌, ಕಚ್ಚಾ ತೈಲ, ಅನಿಲಕ್ಕಾಗಿ ರಷ್ಯಾದ ಅವಲಂಬನೆಯಿಂದ ಹೊರಬರುವಂತೆ ವಿಶ್ವಕ್ಕೆ ಕರೆ ನೀಡಿದ್ದಾರೆ.

ಗಲ್ಫ್‌ ರಾಷ್ಟ್ರಗಳ ಪ್ರವಾಸದಲ್ಲಿರುವ ಬೋರಿಸ್‌ ಜಾನ್ಸನ್‌ ಬುಧವಾರ, ಉಕ್ರೇನ್‌ ಮೇಲಿನ ರಷ್ಯಾದ ಅತಿಕ್ರಮಣವನ್ನು ಪ್ರತಿಭಟಿಸಲು ಅಲ್ಲಿನ ಕಚ್ಚಾ ತೈಲ, ಅನಿಲ ಖರೀದಿಯನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಅಬುಧಾಬಿ ಮತ್ತು ರಿಯಾದ್‌ ಮುಖಂಡರನ್ನು ಭೇಟಿ ಮಾಡಲಿರುವ ಜಾನ್ಸನ್‌ ಅವರು ಉಕ್ರೇನ್‌ ಸಂಘರ್ಷ ಸೇರಿದಂತೆ ಪ್ರಾದೇಶಿಕ ಭದ್ರತೆ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ.

ರಷ್ಯಾ-ಉಕ್ರೇನ್‌ ಯುದ್ಧದ ಪರಿಣಾಮ ಜಾಗತಿಕ ಇಂಧನ ಮತ್ತು ಆಹಾರ ಉತ್ಪನ್ನಗಳ ಬೆಲೆ ಏರಿಕೆಯನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಲಿದ್ದಾರೆ.

'ರಷ್ಯಾವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಟ್ಟಿಹಾಕುವ ಪ್ರಯತ್ನಕ್ಕೆ ಸೌದಿ ಅರೇಬಿಯಾ ಮತ್ತು ಯುಎಇ ರಾಷ್ಟ್ರಗಳು ಪ್ರಮುಖ ಭಾಗಿದಾರರು. ಈ ರಾಷ್ಟ್ರಗಳೊಂದಿಗೆ ಪ್ರಾದೇಶಿಕ ಭದ್ರತೆ, ಮಾನವೀಯ ಪರಿಹಾರ ಮತ್ತು ಜಾಗತಿಕ ಇಂಧನ ಮಾರುಕಟ್ಟೆ ನಿಯಂತ್ರಣದ ವಿಚಾರವಾಗಿ ಜೊತೆಯಾಗಿ ಕೆಲಸ ಮಾಡುತ್ತೇವೆ' ಎಂದು ಜಾನ್ಸನ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು