ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರಾಜೆನೆಕಾ ಕೋವಿಡ್-19 ಲಸಿಕೆ ಹಾಕಿಸಿಕೊಂಡ ಬ್ರಿಟನ್ ಪ್ರಧಾನಿ

Last Updated 20 ಮಾರ್ಚ್ 2021, 3:06 IST
ಅಕ್ಷರ ಗಾತ್ರ

ಲಂಡನ್: ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್ ಅವರು ಆಸ್ಟ್ರಾಜೆನೆಕಾ ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬೋರಿಸ್ ಜಾನ್ಸನ್, ಆಕ್ಸ್‌ಫರ್ಡ್/ಆಸ್ಟ್ರಾಜೆನೆಕಾ ಕೋವಿಡ್ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದೇನೆ. ಇದನ್ನು ತಯಾರಿಸಲು ಸಹಾಯ ಮಾಡಿದ ಎಲ್ಲ ಶ್ರೇಷ್ಠ ವಿಜ್ಞಾನಿಗಳು, ಎನ್‌ಎಚ್‌ಎಸ್ ಸಿಬ್ಬಂದಿ ಮತ್ತು ಸ್ವಯಂಸೇವಕರಿಗೆ ನನ್ನ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಕೊರೊನಾ ಲಸಿಕೆ ಚುಚ್ಚುಮದ್ದು ಪಡೆಯುವುದು ಉತ್ತಮ ಅಂಶವಾಗಿದ್ದು, ನಾವು ಇಷ್ಟು ದಿನ ಕಳೆದುಕೊಂಡಿರುವ ನಮ್ಮ ದೈನಂದಿನಜೀವನಕ್ಕೆ ಮರಳಬಹುದಾಗಿದೆ. ಎಲ್ಲರೂ ಲಸಿಕೆಹಾಕಿಸಿಕೊಳ್ಳೋಣ ಎಂದಿದ್ದಾರೆ.

ಶುಕ್ರವಾರದಂದು ಲಂಡನ್‌ನ ಸೈಂಟ್ ಥಾಮಸ್ ಆಸ್ಪತ್ರೆಯಲ್ಲಿ ಬೋರಿಸ್ ಜಾನ್ಸನ್ ಕೋವಿಡ್ ಲಸಿಕೆ ಹಾಕಿಸಿಕೊಂಡರು. ಅಲ್ಲದೆ ಲಸಿಕೆ ತೆಗೆದುಕೊಳ್ಳುವಾಗ ಯಾವುದೇ ಸಮಸ್ಯೆ ಎದುರಾಗಿಲ್ಲ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಕೋವಿಡ್-19 ರೋಗಕ್ಕೆ ತುತ್ತಾಗಿದ್ದ ಜಾನ್ಸನ್ ಅವರನ್ನು ಸೈಂಟ್ ಥಾಮಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT