ಶನಿವಾರ, ಮಾರ್ಚ್ 25, 2023
27 °C

ಹೃದಯಕ್ಕೆ ಹತ್ತಿರವಾದ ಭಾರತಕ್ಕೆ ಗಣರಾಜ್ಯೋತ್ಸವದ ಶುಭಾಶಯ: ಬೋರಿಸ್ ಜಾನ್ಸನ್

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಲಂಡನ್: ನನ್ನ ಹೃದಯಕ್ಕೆ ಹತ್ತಿರವಾದ ಭಾರತಕ್ಕೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಇಂಗ್ಲೆಂಡ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ತಿಳಿಸಿದ್ದಾರೆ.

‘ಇಂದು ಭಾರತ ಗಣರಾಜ್ಯೋತ್ಸವ ದಿನವನ್ನು ಆಚರಿಸುತ್ತಿದೆ. ಭಾರತ ವಿಶ್ವದ ಅತಿದೊಡ್ಡ ಸಾರ್ವಭೌಮ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಅಸಾಧಾರಣ ಸಂವಿಧಾನವನ್ನು ಹೊಂದಿದೆ. ನನ್ನ ಹೃದಯಕ್ಕೆ ಬಹಳ ಹತ್ತಿರವಿರುವ ದೇಶಕ್ಕೆ ನಾನು ಪ್ರಮಾಣಿಕ ಶುಭಾಶಯಗಳನ್ನು ಅರ್ಪಿಸುತ್ತೇನೆ ಎಂದು ಬೋರಿಸ್‌ ಜಾನ್ಸನ್‌ ಹೇಳಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್‌ ಮಾಡಿದೆ.

ಈ ಬಾರಿಯ ಗಣರಾಜ್ಯೋತ್ಸವಕ್ಕೆ ಬೋರಿಸ್‌ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಆದರೆ, ಇಂಗ್ಲೆಂಡ್‌ನಲ್ಲಿ ರೂಪಾಂತರಿ ಕೊರೊನಾ ವೈರಸ್‌ ದುಷ್ಪರಿಣಾಮ ಬೀರದ ಹಿನ್ನೆಲೆಯಲ್ಲಿ ಬೋರಿಸ್‌, ಭಾರತಕ್ಕೆ ಭೇಟಿ ನೀಡದಿರಲು ನಿರ್ಧರಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು