ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ: ರಿಷಿ ಸುನಕ್

Last Updated 25 ಜುಲೈ 2022, 3:05 IST
ಅಕ್ಷರ ಗಾತ್ರ

ಲಂಡನ್: ಏಷ್ಯಾದ ಸೂಪರ್ ಪವರ್ ದೇಶವು ದೇಶೀಯವಾಗಿ ಮತ್ತು ಜಾಗತಿಕ ಭದ್ರತೆಗೆ ನಂಬರ್ ಒನ್ ಬೆದರಿಕೆಯಾಗಿದೆ ಎಂದು ಹೇಳಿರುವ ಬ್ರಿಟನ್‌ನ ಪ್ರಧಾನಿ ಅಭ್ಯರ್ಥಿ ರಿಷಿ ಸುನಕ್ ಅವರು, ಬ್ರಿಟನ್‌ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ನಿರ್ಧಾರಗಳ ಭರವಸೆ ನೀಡಿದ್ದಾರೆ.

ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ಪ್ರಧಾನಿ ಆಯ್ಕೆಯ ಅಂತಿಮ ಇಬ್ಬರಲ್ಲಿ ರಿಷಿ ಸುನಕ್ ಒಬ್ಬರಾಗಿದ್ದಾರೆ. ಚೀನಾ ಮತ್ತು ರಷ್ಯಾ ವಿಚಾರದಲ್ಲಿ ರಿಷಿ ದುರ್ಬಲರಾಗಿದ್ದಾರೆ ಎಂದು ಅವರ ಪ್ರತಿಸ್ಪರ್ಧಿ ಹಣಕಾಸು ಸಚಿವೆ ಲಿಜ್ ಟ್ರುಸ್ ಆರೋಪಿಸಿದ ಬೆನ್ನಲ್ಲೇ ರಿಷಿ ಈ ಹೇಳಿಕೆ ನೀಡಿದ್ಧಾರೆ.

‘ಬ್ರಿಟನ್-ಚೀನಾ ಸಂಬಂಧಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ಪಷ್ಟ ಮತ್ತು ಪ್ರಾಯೋಗಿಕ ದೃಷ್ಟಿಕೋನ’ ಹೊಂದಿರುವ ಏಕೈಕ ಅಭ್ಯರ್ಥಿ ರಿಷಿ ಸುನಕ್ ಎಂದು ಚೀನಾದ ಗ್ಲೋಬಲ್ ಟೈಮ್ಸ್ ಹೇಳಿತ್ತು.

ಚೀನಾದ ಸಂಸ್ಕೃತಿ ಮತ್ತು ಭಾಷಾ ಕಾರ್ಯಕ್ರಮಗಳ ಮೂಲಕ ಚೀನೀ ಪ್ರಭಾವವನ್ನು ಹೆಚ್ಚಿಸುವುದನ್ನು ತಡೆಯಲು ಬ್ರಿಟನ್‌ನ ಎಲ್ಲಾ 30 ಕನ್ಫ್ಯೂಷಿಯಸ್ ಸಂಸ್ಥೆಗಳನ್ನು ಮುಚ್ಚುವುದಾಗಿ ರಿಷಿ ಸುನಕ್ ತಮ್ಮ ಪ್ರಸ್ತಾಪದಲ್ಲಿ ತಿಳಿಸಿದ್ಧಾರೆ.

ಇದೇವೇಳೆ, ಚೀನೀ ಕಮ್ಯುನಿಸ್ಟ್ ಪಕ್ಷವನ್ನು ನಮ್ಮ ವಿಶ್ವವಿದ್ಯಾಲಯಗಳಿಂದ ಹೊರಹಾಕುವುದಾಗಿಯೂ ಅವರು ಭರವಸೆ ನೀಡಿದ್ದಾರೆ.

ಬ್ರಿಟನ್‌ನ ದೇಶೀಯ ಬೇಹುಗಾರಿಕೆ ಸಂಸ್ಥೆ ಎಂಐ5 ಅನ್ನು ಚೀನೀ ಬೇಹುಗಾರಿಕೆಯನ್ನು ಎದುರಿಸಲು ಬಳಸಲಾಗುವುದು ಮತ್ತು ಸೈಬರ್‌ಸ್ಪೇಸ್‌ನಲ್ಲಿ ಚೀನಾದ ಬೆದರಿಕೆಗಳನ್ನು ನಿಭಾಯಿಸಲು ‘ನ್ಯಾಟೊ-ಶೈಲಿಯ’ ಅಂತರರಾಷ್ಟ್ರೀಯ ಸಹಕಾರವನ್ನು ಹೆಚ್ಚಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ಆಯಕಟ್ಟಿನ ಸೂಕ್ಷ್ಮ ತಂತ್ರಜ್ಞಾನ ಸಂಸ್ಥೆಗಳು ಸೇರಿದಂತೆ ಪ್ರಮುಖ ಬ್ರಿಟಿಷ್ ಸ್ವತ್ತುಗಳನ್ನು ಚೀನೀಯರು ಸ್ವಾಧೀನಪಡಿಸಿಕೊಳ್ಳುವುದನ್ನು ನಿಷೇಧಿಸುವ ಕುರಿತು ಅಧ್ಯಯನ ಮಾಡುವುದಾಗಿ ಹೇಳಿದ್ದಾರೆ.

ಚೀನಾವು ‘ನಮ್ಮ ತಂತ್ರಜ್ಞಾನವನ್ನು ಕದಿಯುತ್ತಿದೆ ಮತ್ತು ನಮ್ಮ ವಿಶ್ವವಿದ್ಯಾನಿಲಯಗಳಿಗೆ ನುಸುಳುತ್ತಿದೆ’ಎಂದು ಸುನಕ್ ಪ್ರತಿಪಾದಿಸಿದರು. ರಷ್ಯಾದ ತೈಲವನ್ನು ಖರೀದಿಸುವ ಮೂಲಕ ವಿದೇಶದಲ್ಲಿ ವ್ಲಾಡಿಮಿರ್ ಪುಟಿನ್ ಅವರಿಗೆ ನೆರವು ನೀಡುತ್ತಿದೆ ಮತ್ತು ತೈವಾನ್ ಸೇರಿದಂತೆ ನೆರೆಹೊರೆಯವರನ್ನು ಬೆದರಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ಧಾರೆ.

ಇದನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT