ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Russia-Ukraine War: ಪುಟಿನ್‌ ನಿರ್ಧಾರಕ್ಕೆ ಬ್ರಿಟನ್‌ ಪ್ರಧಾನಿಯಿಂದಲೂ ವಿರೋಧ

Last Updated 24 ಫೆಬ್ರುವರಿ 2022, 6:23 IST
ಅಕ್ಷರ ಗಾತ್ರ

ಲಂಡನ್‌: ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಖಂಡಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಉಕ್ರೇನ್ ಮೇಲೆ ಅಪ್ರಚೋದಿತ ದಾಳಿಯನ್ನು ಪ್ರಾರಂಭಿಸುವ ಮೂಲಕ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಕ್ತಪಾತ ಮತ್ತು ವಿನಾಶದ ಮಾರ್ಗವನ್ನು ಆರಿಸಿಕೊಂಡಿದ್ದಾರೆ’ ಎಂದು ಕಿಡಿಕಾರಿದ್ದಾರೆ.

‘ಉಕ್ರೇನ್ ಮೇಲೆ ರಷ್ಯಾ ದಾಳಿಯಿಂದಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ. ರಷ್ಯಾ ವಿರುದ್ಧ ಕೈಗೊಳ್ಳಬೇಕಾ‌ದ ಮುಂದಿನ ಕ್ರಮಗಳ ಕುರಿತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ’ ಎಂದು ಜಾನ್ಸನ್‌ ಹೇಳಿದ್ದಾರೆ.

ಪಾಶ್ಚಿಮಾತ್ಯ ದೇಶಗಳು ಮತ್ತು ವಿಶ್ವ ಸಮುದಾಯದ ಎಚ್ಚರಿಕೆಯನ್ನು ಧಿಕ್ಕರಿಸಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದಾರೆ. ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ಉಕ್ರೇನ್ ಸೈನಿಕರಿಗೆ ಅವರು ಕರೆ ನೀಡಿದ್ದಾರೆ.

‘ನಾನು ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ಮಾಡಿದ್ದೇನೆ’ ಎಂದು ಅವರು ದೂರದರ್ಶನದ ಮೂಲಕ ಘೊಷಣೆ ಮಾಡಿದ್ದಾರೆ. ಇದೇ ವೇಳೆ, ಕಾರ್ಯಾಚರಣೆಯ ಮಧ್ಯ ಪ್ರವೇಶಿಸುವವರ ವಿರುದ್ಧ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT