ಶುಕ್ರವಾರ, ಡಿಸೆಂಬರ್ 2, 2022
19 °C

ಅತ್ಯಂತ ಅಪಾಯಕಾರಿ ದೇಶಗಳ ಪಟ್ಟಿಯಿಂದ ಪಾಕ್‌ ಹೆಸರು ಕೈಬಿಟ್ಟ ಬ್ರಿಟನ್

ಪಿಟಿಐ Updated:

ಅಕ್ಷರ ಗಾತ್ರ : | |

ಲಂಡನ್: ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ನೀಡುವ ದೇಶಗಳ ಹೆಸರುಗಳಿರುವ ‘ಅತ್ಯಂತ ಅಪಾಯಕಾರಿ ದೇಶಗಳ ಪಟ್ಟಿ’ಯಿಂದ ಪಾಕಿಸ್ತಾನದ ಹೆಸರನ್ನು ಬ್ರಿಟನ್‌ ಸರ್ಕಾರ ತೆಗೆದು ಹಾಕಿದೆ.

ಈ ವಿಷಯಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆಯನ್ನು ಸಂಸತ್‌ನಲ್ಲಿ ಸೋಮವಾರ ಮಂಡಿಸಲಾಗಿದೆ. ನಿಕರಾಗುವ ಹೆಸರನ್ನು ಕೂಡ ಈ ಪಟ್ಟಿಯಿಂದ ಕೈಬಿಡಲಾಗಿದೆ. ಇರಾನ್‌, ಮ್ಯಾನ್ಮಾರ್ ಹಾಗೂ ಸಿರಿಯಾ ಸೇರಿ 26 ದೇಶಗಳ ಹೆಸರುಗಳು ಈಗ ಈ ಪಟ್ಟಿಯಲ್ಲಿವೆ.

‘ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ಹರಿಯುವುದನ್ನು ತಡೆಗಟ್ಟಲು ಪಾಕಿಸ್ತಾನ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಖಜಾನೆ ಇಲಾಖೆಯ ಸಲಹಾ ಮಂಡಳಿಯು ತನ್ನ ಟಿಪ್ಪಣಿಯಲ್ಲಿ ಈ ಅಂಶವನ್ನು ಉಲ್ಲೇಖಿಸಿದೆ. ಹೀಗಾಗಿ ಪಟ್ಟಿಯಿಂದ ಪಾಕಿಸ್ತಾನದ ಹೆಸರನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ’ ಎಂದು ಮಸೂದೆಯಲ್ಲಿ ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು