ಮಾಸ್ಕೋ: ಬೆಲರೂಸ್ ಗಡಿಯಲ್ಲಿರಷ್ಯಾದೊಂದಿಗೆ ಮಾತುಕತೆ ನಡೆಸಲು ಉಕ್ರೇನ್ ಭಾನುವಾರ ಒಪ್ಪಿಕೊಂಡಿದೆ ಎಂದು ರಷ್ಯಾಮಾಧ್ಯಮ ತಿಳಿಸಿದೆ. ಈ ಕುರಿತುಸುದ್ದಿಸಂಸ್ಥೆ ‘ಎಎಫ್‌ಪಿ’ ವರದಿ ಮಾಡಿದೆ.

ಉಕ್ರೇನ್ ಜತೆಗೆ ಬೆಲರೂಸ್‌ನಲ್ಲಿ ಮಾತುಕತೆ ನಡೆಸಲು ಸಿದ್ಧವಿರುವುದಾಗಿ ರಷ್ಯಾ ಭಾನುವಾರ ಬೆಳಿಗ್ಗೆ ಹೇಳಿಕೆ ನೀಡಿತ್ತು. ಆದರೆ, ಬೆಲರೂಸ್‌ನಲ್ಲಿ ಮಾತುಕತೆ ನಡೆಸಲು ತಾನು ಸಿದ್ಧವಿಲ್ಲ. ಬೇರೆ ಸ್ಥಳದಲ್ಲಿ ಶಾಂತಿ ಮಾತುಕತೆ ನಡೆಸಲು ಒಪ್ಪುವುದಾಗಿ ಉಕ್ರೇನ್ ಹೇಳಿತ್ತು.

‘ರಷ್ಯಾದ ಜೊತೆಗೆ ಮಾತುಕತೆಗೆ ಉಕ್ರೇನ್ ಸಿದ್ಧವಾಗಿದೆ. ಆದರೆ, ನೆರೆಯ ಬೆಲರೂಸ್‌ನಲ್ಲಿ ಅಲ್ಲ. ಉಕ್ರೇನ್ ಮೇಲೆ ಆಕ್ರಮಣ ನಡೆಸಲು ಬೆಲರೂಸ್ ಅನ್ನು ರಷ್ಯಾ ಬಳಸಿಕೊಂಡಿದೆ. ಹೀಗಾಗಿ ಅಲ್ಲಿ ಮಾತುಕತೆ ಬೇಡ’ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ತಿಳಿಸಿದ್ದರು.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ (ಫೆ.24) ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದು, ಇದರ ಬೆನ್ನಲ್ಲೇ ರಷ್ಯಾದ ಸೇನಾಪಡೆಗಳು ಉಕ್ರೇನ್‌ನ ಪ್ರಮುಖ ವಾಯುನೆಲೆಗಳು, ನಗರಗಳ ಮೇಲೆ ಕ್ಷಿಪಣಿ ಮತ್ತು ಶೆಲ್ ದಾಳಿ ನಡೆಸಿವೆ.

ಇದೀಗ ಉಕ್ರೇನ್ ರಾಜಧಾನಿ ಕೀವ್, ಖಾರ್ಕಿವ್ ನಗರವನ್ನು ವಶಪಡಿಸಿಕೊಳ್ಳಲು ರಷ್ಯಾ ಪಡೆಗಳು ಮುಂದಾಗಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಅಮೆರಿಕ, ಬ್ರಿಟನ್, ಯುರೋಪ್ ಒಕ್ಕೂಟ ಸೇರಿದಂತೆ ಹಲವು ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ. ರಷ್ಯಾ ಕೂಡಲೇ ದಾಳಿ ನಿಲ್ಲಿಸುವಂತೆ ಆಗ್ರಹಿಸಿ ಅನೇಕ ದೇಶಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ:ರಷ್ಯಾ ವಿಮಾನಗಳಿಗೆ ವಾಯುಮಾರ್ಗ ಮುಚ್ಚಲು ಜರ್ಮನಿಯಿಂದಲೂ ನಿರ್ಧಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.