ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿ ಸ್ಥಾಪನೆಗೆ ಇಡೀ ವಿಶ್ವವೇ ರಷ್ಯಾದ ಮೇಲೆ ಒತ್ತಡ ಹೇರಲಿ: ಉಕ್ರೇನ್‌ ಅಧ್ಯಕ್ಷ

Last Updated 24 ಫೆಬ್ರುವರಿ 2022, 7:02 IST
ಅಕ್ಷರ ಗಾತ್ರ

ಕೀವ್: ‘ಶಾಂತಿ ಸ್ಥಾಪನೆಗೆ ಇಡೀ ವಿಶ್ವವೇ ರಷ್ಯಾದ ಮೇಲೆ ಒತ್ತಡ ಹೇರಬೇಕು’ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಮನವಿ ಮಾಡಿದ್ದಾರೆ.

ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸಿರುವ ರಷ್ಯಾದ ಕ್ರಮವನ್ನು ಅವರು ಖಂಡಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಮತ್ತು ಮಿತ್ರರಾಷ್ಟ್ರಗಳು ಮೈತ್ರಿಕೂಟ ನಿರ್ಮಿಸುತ್ತಿವೆ’ ಎಂದು ಹೇಳಿದ್ದಾರೆ.

‘ಯುಎಸ್, ಬ್ರಿಟನ್, ಜರ್ಮನಿ ಮತ್ತು ಪೋಲೆಂಡ್‌ ನಾಯಕರೊಂದಿಗೆ ಮಾತುಕತೆ ನಡೆಸಿದ ನಂತರ ನಾವು ಪುಟಿನ್ ವಿರೋಧಿ ಒಕ್ಕೂಟವನ್ನು ನಿರ್ಮಿಸುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಪಾಶ್ಚಿಮಾತ್ಯ ದೇಶಗಳು ಮತ್ತು ವಿಶ್ವ ಸಮುದಾಯದ ಎಚ್ಚರಿಕೆಯನ್ನು ಧಿಕ್ಕರಿಸಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಣೆ ಮಾಡಿದ್ದಾರೆ.

ರಷ್ಯಾ ಕ್ರಮವನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT