ಕೀವ್: ಉಕ್ರೇನ್‌ನ ಎಲ್ವಿವ್ ನಗರದ ಮೇಲೆ ರಷ್ಯಾದಿಂದ ರಾಕೆಟ್ ದಾಳಿ ನಡೆದಿದೆ ಎಂದು ಅಲ್ಲಿನ ಗವರ್ನರ್ ಮ್ಯಾಕ್ಸಿಮ್ ಕೊಜಿಟ್ಸಕಿ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ‘ರಾಯಟರ್ಸ್’ ವರದಿ ಮಾಡಿದೆ.

ಈ ದಾಳಿಯಲ್ಲಿ ಐವರು ಗಾಯಗೊಂಡಿದ್ದು, ನಿರಾಶ್ರಿತರಿಗೆ ಆಶ್ರಯ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರತರಾಗಿದ್ದಾರೆ ಎಂದು ಗವರ್ನರ್ ತಿಳಿಸಿದ್ದಾರೆ.

ಇದೇ ವೇಳೆ ಪೋಲೆಂಡ್‌ನಲ್ಲಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, ‘ಮುಂದೆ ಸುದೀರ್ಘ ಹೋರಾಟವಿದೆ’ ಎಂದು ಎಚ್ಚರಿಸಿದ್ದಾರೆ.

‘ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ವಿರೋಧಿಸಬೇಕಿದೆ. ಈ ವಿಚಾರದಲ್ಲಿ ದೇಶಗಳು ಮುಕ್ತವಾಗಿರಬೇಕು. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅಧಿಕಾರದಲ್ಲಿರಲು ಯೋಗ್ಯರಲ್ಲ. ಉಕ್ರೇನ್ ಮೇಲಿನ ದಾಳಿಯು ಅವರ ಕಾರ್ಯತಂತ್ರದ ವೈಫಲ್ಯ’ ಎಂದು ಬೈಡನ್ ತಿಳಿಸಿದ್ದಾರೆ.

ಫೆಬ್ರುವರಿ 24ರಿಂದ ರಷ್ಯಾ ದಾಳಿಯ ಪರಿಣಾಮ ಉಕ್ರೇನ್‌ನ ಸುಮಾರು 30 ಲಕ್ಷ ಜನರು ತಮ್ಮ ರಾಷ್ಟ್ರ ತೊರೆದು ವಲಸೆ ಹೋಗಿದ್ದು, ಪಶ್ಚಿಮ ರಾಷ್ಟ್ರಗಳ ಬೆಂಬಲ ಕೋರಿದ್ದಾರೆ. ನೂರಾರು ನಾಗರಿಕರು ಸಾವಿಗೀಡಾಗಿದ್ದಾರೆ ಹಾಗೂ ಸಾವಿರಾರು ಮಂದಿ ಗಾಯಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.