ಉಕ್ರೇನ್: ಕೀವ್ ಬಳಿ ಹೆಲಿಕಾಪ್ಟರ್ ಪತನ: ಆಂತರಿಕ ಸಚಿವ ಸೇರಿ 16 ಮಂದಿ ಸಾವು

ಕೀವ್: ಉಕ್ರೇನ್ ರಾಜಧಾನಿ ಕೀವ್ ಹೊರವಲಯದ ಶಿಶುವಿಹಾರದ ಬಳಿ ಹೆಲಿಕಾಪ್ಟರ್ ಪತನಗೊಂಡು ಎರಡು ಮಕ್ಕಳು, ಉಕ್ರೇನ್‌ನ ಆಂತರಿಕ ಸಚಿವ ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಸದ್ಯ 16 ಮಂದಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ’ಎಂದು ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಇಗೊರ್ ಕ್ಲೈಮೆಂಕೊ ತಿಳಿಸಿದ್ದಾರೆ.
ಮೃತರಲ್ಲಿ ಆಂತರಿಕ ಸಚಿವ ಡೆನಿಸ್ ಮೊನಾಸ್ಟಿರ್‌ಸ್ಕಿ, ಆಂತರಿಕ ಸಚಿವಾಲಯದ ಉನ್ನತ ಅಧಿಕಾರಿಗಳು ಸೇರಿದ್ದಾರೆ ಎಂದು ಅವರು ಹೇಳಿದ್ಧಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.