ಶುಕ್ರವಾರ, ಆಗಸ್ಟ್ 19, 2022
22 °C

ಬ್ರಿಟನ್, ಜರ್ಮನಿ ಸೇರಿದಂತೆ 36 ರಾಷ್ಟ್ರಗಳ ವಿಮಾನಗಳನ್ನು ನಿಷೇಧಿಸಿದ ರಷ್ಯಾ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಮಾಸ್ಕೋ: ಬ್ರಿಟನ್ ಮತ್ತು ಜರ್ಮನಿ ಸೇರಿದಂತೆ 36 ದೇಶಗಳ ವಿಮಾನಗಳನ್ನು ನಿಷೇಧಿಸಿರುವುದಾಗಿ ರಷ್ಯಾ ಹೇಳಿದೆ.

ಉಕ್ರೇನ್‌ ಮೇಲಿನ ಆಕ್ರಮಣದ ಹಿನ್ನೆಲೆಯಲ್ಲಿ ಯುರೋಪ್‌ ರಾಷ್ಟ್ರಗಳು ಹಾಗೂ ಕೆನಡಾದ ವಾಯುಪ್ರದೇಶವನ್ನು ಪ್ರವೇಶಿಸಲು ರಷ್ಯಾದ ವಿಮಾನಗಳಿಗೆ ನಿಷೇಧ ಹೇರಲಾಗಿದೆ.

ಖಾಸಗಿ ಜೆಟ್‌ಗಳು ಸೇರಿದಂತೆ ರಷ್ಯಾದ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವುದಾಗಿ ಐರೋಪ್ಯ ಒಕ್ಕೂಟ ಭಾನುವಾರ ಘೋಷಿಸಿದೆ.

ಈ ಹಿನ್ನೆಲೆಯಲ್ಲಿ ರಷ್ಯಾ ಸರ್ಕಾರ 36 ರಾಷ್ಟ್ರಗಳ ವಿಮಾನ ಪ್ರವೇಶಕ್ಕೆ ನಿರ್ಬಂಧ ಹೇರಿದೆ.

ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ 14 ಮಕ್ಕಳು ಸೇರಿದಂತೆ, 350ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆಂದು ವರದಿಯಾಗಿದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಅಮೆರಿಕ, ಬ್ರಿಟನ್, ಯುರೋಪ್ ಒಕ್ಕೂಟ ಸೇರಿದಂತೆ ಹಲವು ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ. ರಷ್ಯಾ ಕೂಡಲೇ ದಾಳಿ ನಿಲ್ಲಿಸುವಂತೆ ಆಗ್ರಹಿಸಿ ಅನೇಕ ದೇಶಗಳಲ್ಲಿ ಪ್ರತಿಭಟನೆಗಳನ್ನು ನಡೆಯುತ್ತಿವೆ.

ಇವನ್ನೂ ಓದಿ...

ಉಕ್ರೇನ್‌ಗೆ ಶಸ್ತ್ರಾಸ್ತ್ರ ಪೂರೈಕೆ: ಐರೋಪ್ಯ ಒಕ್ಕೂಟ ದೇಶಗಳ ರಕ್ಷಣಾ ಸಚಿವರ ಸಭೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು