ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾದಿಂದ ಆಕ್ರಮಣ: ಉಕ್ರೇನ್‌ನ ಹಲವು ನಗರಗಳಲ್ಲಿ ಸ್ಫೋಟದ ಸದ್ದು

Last Updated 24 ಫೆಬ್ರುವರಿ 2022, 5:17 IST
ಅಕ್ಷರ ಗಾತ್ರ

ಮಾಸ್ಕೋ: ಅಮೆರಿಕ ಮತ್ತು ವಿಶ್ವ ಸಮುದಾಯಗಳ ಎಚ್ಚರಿಕೆ ನಡುವೆಯೂ ರಷ್ಯಾ, ಉಕ್ರೇನ್ ಮೇಲೆ ಆಕ್ರಮಣ ಆರಂಭಿಸಿದೆ. ರಷ್ಯಾದಿಂದ ನಮ್ಮ ದೇಶದ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ಆಗಿದ್ದು, ಹಲವೆಡೆ ಸ್ಫೋಟದ ಸದ್ದು ಕೇಳಿಬರುತ್ತಿದೆ ಎಂದು ಉಕ್ರೇನ್ ಹೇಳಿದೆ.

ಬೆಳಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ದೂರದರ್ಶನದ ಹೇಳಿಕೆಯಲ್ಲಿ ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಣೆ ಮಾಡಿದ್ದರು.

ಪುಟಿನ್ ಘೋಷಣೆ ಬೆನ್ನಲ್ಲೇ ಉಕ್ರೇನ್‌ನ ಹಲವು ನಗರಗಳಲ್ಲಿ ಸ್ಫೋಟಗಳ ಸದ್ದು ಕೇಳಿಸುತ್ತಿದೆ ಎಂದು ವರದಿಯಾಗಿದೆ. ರಷ್ಯಾ ಸಂಸತ್, ದೇಶದ ಹೊರಗಡೆ ಮಿಲಿಟರಿ ಬಳಕೆಗೆ ಪುಟಿನ್ ಅವರಿಗೆಸೋಮವಾರ ಅನುಮತಿ ನೀಡಿತ್ತು. ಇದರ ಬೆನ್ನಲ್ಲೇ ನಿನ್ನೆ, ಪೂರ್ವ ಉಕ್ರೇನ್‌ನ ಪ್ರದೇಶಗಳ ಬಂಡುಕೋರರು ಉಕ್ರೇನ್‌ ವಿರುದ್ಧ ರಷ್ಯಾ ಬೆಂಬಲ ಕೋರಿದ್ದಾರೆ ಎಂದು ಪುಟಿನ್ ಹೇಳಿದ್ದರು.

ರಷ್ಯಾ ಆಕ್ರಮಣವನ್ನು ಖಂಡಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, ‘ರಷ್ಯಾ ಅಧ್ಯಕ್ಷ ಪುಟಿನ್ ಪೂರ್ವಯೋಜಿತ ಯುದ್ಧವನ್ನು ಆರಿಸಿಕೊಂಡಿದ್ದಾರೆ. ಅದು ದುರಂತಮಯ ಜೀವಹಾನಿ ಮತ್ತು ಸಂಕಟವನ್ನು ತರುತ್ತದೆ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT