ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾದ ಹೂಡಿಕೆದಾರರಿಗೆ ವಾಸಿಸಲು ಅನುಮತಿ ನಿರಾಕರಿಸಿದ ಗ್ರೀಸ್‌

Last Updated 28 ಫೆಬ್ರುವರಿ 2022, 11:30 IST
ಅಕ್ಷರ ಗಾತ್ರ

ಅಥೆನ್ಸ್‌: ಉಕ್ರೇನ್‌ ಮೇಲಿನ ಆಕ್ರಮಣ ಹಿನ್ನೆಲೆಯಲ್ಲಿ ರಷ್ಯಾ ಮೂಲದ ಹೂಡಿಕೆದಾರರಿಗೆ ಗ್ರೀಸ್‌ ದೇಶವು ನಿರ್ಬಂಧ ಹೇರಲು ಮುಂದಾಗಿದೆ.

ಗ್ರೀಸ್‌ನಲ್ಲಿ ಬಂಡವಾಳ ಹೂಡಿಕೆ ಮಾಡಲು ಬಯಸುವ ಶ್ರೀಮಂತ ರಷ್ಯನ್ನರಿಗೆ ವಾಸಿಸಲು ನೀಡುವ ಪರವಾನಗಿಯನ್ನು ಸ್ಥಗಿತಗೊಳಿಸಲಾಗಿದೆ. ‘ಮುಂದಿನ ಸೂಚನೆವರೆಗೂ’ ಇದು ಜಾರಿಯಲ್ಲಿರುತ್ತದೆ ಎಂದು ಅಲ್ಲಿನ ವಲಸೆ ಸಚಿವಾಲಯ ತಿಳಿಸಿದೆ.

ಈ ನಿರ್ಧಾರವು ಪ್ರಸ್ತುತ ಪರಿಗಣಿಸಲ್ಪಡುತ್ತಿರುವ ಹಾಗೂ ಹೊಸ ಪರವಾನಗಿ ಅರ್ಜಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಸಚಿವಾಲಯ ಹೇಳಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ (ಫೆ.24) ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದು, ಇದರ ಬೆನ್ನಲ್ಲೇ ರಷ್ಯಾದ ಸೇನಾಪಡೆಗಳು ಉಕ್ರೇನ್‌ನ ಪ್ರಮುಖ ವಾಯುನೆಲೆಗಳು, ನಗರಗಳ ಮೇಲೆ ಕ್ಷಿಪಣಿ ಮತ್ತು ಶೆಲ್ ದಾಳಿ ನಡೆಸಿವೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಅಮೆರಿಕ, ಬ್ರಿಟನ್, ಯುರೋಪ್ ಒಕ್ಕೂಟ ಸೇರಿದಂತೆ ಹಲವು ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ. ರಷ್ಯಾ ಕೂಡಲೇ ದಾಳಿ ನಿಲ್ಲಿಸುವಂತೆ ಆಗ್ರಹಿಸಿ ಅನೇಕ ದೇಶಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT