ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ ರಾಕೆಟ್ ದಾಳಿ: ಉಕ್ರೇನ್ ನಟಿ ಒಕ್ಸಾನಾ ಶ್ವೆಟ್ಸ್ ಸಾವು 

Last Updated 18 ಮಾರ್ಚ್ 2022, 9:58 IST
ಅಕ್ಷರ ಗಾತ್ರ

ಕೀವ್: ನಗರದ ವಸತಿ ಕಟ್ಟಡವೊಂದರ ಮೇಲೆ ರಷ್ಯಾ ನಡೆಸಿದ ರಾಕೆಟ್ ದಾಳಿಯಲ್ಲಿ ಉಕ್ರೇನ್ ನಟಿ ಒಕ್ಸಾನಾ ಶ್ವೆಟ್ಸ್ ಮೃತಪಟ್ಟಿದ್ದಾರೆ.

ಒಕ್ಸಾನಾ ಅವರಿಗೆ 67 ವರ್ಷವಯಸ್ಸಾಗಿತ್ತು. ಅವರು ಉಕ್ರೇನ್‌ನ ‘ಅತ್ಯುನ್ನತ ಕಲಾವಿದೆ’ಗೌರವಕ್ಕೆ ಪಾತ್ರರಾಗಿದ್ದರು.

ಒಕ್ಸಾನಾ ಅವರ ಹತ್ಯೆಯನ್ನು ದೃಢಪಡಿಸಿರುವ ಅವರ ಯಂಗ್ ಥಿಯೇಟರ್ ತಂಡ ಹೇಳಿಕೆಯನ್ನು ಹೊರಡಿಸಿದ್ದು ಅದರಲ್ಲಿ, ಕೀವ್‌ನ ವಸತಿ ಕಟ್ಟಡದ ಮೇಲೆ ನಡೆದ ರಾಕೆಟ್ ದಾಳಿಯಲ್ಲಿ ಖ್ಯಾತ ಕಲಾವಿದೆ ಒಕ್ಸಾನಾ ಶ್ವೆಟ್ಸ್ ನಿಧನರಾಗಿದ್ದಾರೆ ಎಂದು ಖಚಿತಪಡಿಸಿದೆ.

ಫೆ.24 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಸೇನಾ ಕಾರ್ಯಾಚರಣೆಯನ್ನು ಘೋಷಿಸಿದ್ದರು. ಅಂದಿನಿಂದ ರಷ್ಯಾ ಪಡೆಗಳು ಉಕ್ರೇನ್ ಮೇಲೆ ಆಕ್ರಮಣವನ್ನು ಮುಂದುವರಿಸಿದ್ದು, ಯೋಧರು, ನಾಗರಿಕರು ಸೇರಿದಂತೆ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ವಿಶ್ವಸಂಸ್ಥೆ ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿಯ ಪ್ರಕಾರ, ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಆರಂಭವಾದಾಗಿನಿಂದ ಉಕ್ರೇನ್‌ನಲ್ಲಿ ಸುಮಾರು 600 ನಾಗರಿಕರು ಮೃತಪಟ್ಟಿದ್ದು, 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT