ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಮಾಣು ಸ್ಥಾವರದ ಮೇಲೆ ರಷ್ಯಾ ದಾಳಿ: ಉಕ್ರೇನ್‌ನ ಮೂವರು ಯೋಧರ ಸಾವು

Last Updated 4 ಮಾರ್ಚ್ 2022, 13:33 IST
ಅಕ್ಷರ ಗಾತ್ರ

ಕೀವ್: ಝಪೋರಿಝಿಯಾ ಪರಮಾಣು ಸ್ಥಾವರದ ಮೇಲೆ ರಷ್ಯಾ ನಡೆಸಿದ ಶೆಲ್ ದಾಳಿಯಿಂದಾಗಿ ಉಕ್ರೇನ್‌ನ ಮೂವರು ಯೋಧರು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ನ ಸರ್ಕಾರಿ ಸ್ವಾಮ್ಯದ ಪರಮಾಣು ಸಂಸ್ಥೆ ತಿಳಿಸಿದೆ.

ಶೆಲ್ ದಾಳಿಯಿಂದಾಗಿ ಉಂಟಾದ ಬೆಂಕಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ ಡೈರೆಕ್ಟರ್ ಜನರಲ್ ರಫೆಲ್ ಮರಿಯಾನೊ ಗ್ರಾಸ್ಸಿ ತಿಳಿಸಿದ್ದಾರೆ.

ಶೆಲ್‌ ದಾಳಿಯಿಂದ ಉಕ್ರೇನ್‌ ಆಗ್ನೇಯ ಭಾಗದಲ್ಲಿರುವ ಯೂರೋಪ್‌ನ ಅತಿದೊಡ್ಡ ಪರಮಾಣು ಸ್ಥಾವರಕ್ಕೆ ಬೆಂಕಿ ಬಿದ್ದಿತ್ತು. ಕೂಡಲೇ ಎಚ್ಚೆತ್ತ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಜಾಗತಿಕವಾಗಿ ವಿರೋಧ ವ್ಯಕ್ತವಾಗುತ್ತಿದ್ದರೂ ಕೂಡ, ಉಕ್ರೇನ್ ಮೇಲೆ ರಷ್ಯಾದ ಪಡೆಗಳು ದಾಳಿಯನ್ನು ಮುಂದುವರಿಸಿವೆ. ಆದರೆ, ವಿಕಿರಣ ಸೋರಿಕೆ ಆಗಿಲ್ಲ ಎಂದು ವಿಶ್ವಸಂಸ್ಥೆ ಮತ್ತು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾದ ಪಡೆಗಳು ಇಡೀ ಪ್ರದೇಶವನ್ನು ವಶಕ್ಕೆ ಪಡೆದಿವೆ. ಆದರೆ, ಸ್ಥಾವರ ನಮ್ಮ ನಿಯಂತ್ರಣದಲ್ಲೇ ಇದೆ. ಸ್ಥಾವರದಲ್ಲಿರುವ ಸಿಬ್ಬಂದಿ ಕೆಲಸವನ್ನು ಮುಂದುವರಿಸಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

'ಇತಿಹಾಸದಲ್ಲಿ ರಷ್ಯಾವನ್ನು ಹೊರತುಪಡಿಸಿ ಬೇರೆ ಯಾವುದೇ ರಾಷ್ಟ್ರ ಪರಮಾಣು ಸ್ಥಾವರದ ಘಟಕಗಳ ಮೇಲೆ ಶೆಲ್‌ ದಾಳಿ ನಡೆಸಿಲ್ಲ. ಇದೇ ಮೊದಲ ಬಾರಿಗೆ ಮಾನವಕುಲದ ಇತಿಹಾಸದಲ್ಲಿ ಇಂತಹದ್ದೊಂದು ಉಗ್ರ ಕೃತ್ಯ ದಾಖಲಾಗಿದೆ. ಭಯೋತ್ಪಾದಕ ರಾಷ್ಟ್ರವು ಈಗ ಪರಮಾಣು ಭಯೋತ್ಪಾದನೆಯನ್ನು ನಡೆಸುತ್ತಿದೆ' ಎಂದು ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT