ಸೋಮವಾರ, ಡಿಸೆಂಬರ್ 5, 2022
24 °C

ಪಾಕ್‌ನಲ್ಲಿ 57 ಲಕ್ಷ ಮಂದಿಗೆ ಆಹಾರ ಬಿಕ್ಕಟ್ಟು: ವಿಶ್ವಸಂಸ್ಥೆ ಎಚ್ಚರಿಕೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಇಸ್ಲಮಾಬಾದ್‌: ಪಾಕಿಸ್ತಾನದ ಸುಮಾರು 57 ಲಕ್ಷ ಪ್ರವಾಹ ಸಂತ್ರಸ್ತರು ಮುಂದಿನ ಮೂರು ತಿಂಗಳಲ್ಲಿ ಗಂಭೀರವಾದ ಆಹಾರ ಸಮಸ್ಯೆ ಎದುರಿಸಲಿದ್ದಾರೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ.

ಪಾಕಿಸ್ತಾನದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಆಹಾರ ಅಭದ್ರತೆಗೆ ಕಾರಣವಾಗಲಿದೆ. ಪ್ರವಾಹ ಪೀಡಿತ ಸ್ಥಳಗಳ ಸುಮಾರು 57 ಲಕ್ಷ ಜನರು ಸೆಪ್ಟೆಂಬರ್‌ ಮತ್ತು ನವೆಂಬರ್‌ ವೇಳೆಗೆ ಆಹಾರ ಬಿಕ್ಕಟ್ಟು ಎದುರಿಸಲಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವೀಯ ಸಹಕಾರ ಇಲಾಖೆ ತಿಳಿಸಿದೆ.

ದೇಶದಲ್ಲಿ ಪ್ರವಾಹದಲ್ಲಿ ಸಿಲುಕಿ ಈವರೆಗೆ 1,695 ಮಂದಿ ಮೃತಪಟ್ಟಿದ್ದಾರೆ, 3.3 ಕೋಟಿ ಮಂದಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. 20 ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ, ಸಾವಿರಾರು ಜನರು ಮನೆ ನೆಲೆ ಕಳೆದುಕೊಂಡು ಗುಡಿಸಲು, ಟೆಂಟ್‌ಗಳಲ್ಲಿ ವಾಸ ಮಾಡುತ್ತಿದ್ದಾರೆ ಎಂದು ಪಾಕಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು