ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಟನಕಾರರ ಮೇಲೆ ಅನಗತ್ಯ ಬಲ ಪ್ರಯೋಗ ಬೇಡ: ಗುಟೆರಸ್‌

Last Updated 28 ಸೆಪ್ಟೆಂಬರ್ 2022, 11:34 IST
ಅಕ್ಷರ ಗಾತ್ರ

ದುಬೈ: ಪೊಲೀಸ್‌ ಕಸ್ಟಡಿಯಲ್ಲಿನ ಯುವತಿ ಸಾವು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಅನಗತ್ಯ ಬಲ ಪ್ರಯೋಗ ನಡೆಸದಂತೆ ಇರಾನ್‌ಗೆ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ಕರೆ ನೀಡಿದ್ದಾರೆ.

ಇರಾನ್‌ನ ಪ್ರಾಂತ್ಯದಲ್ಲಿ ಅಶಾಂತಿಗೆ ಕಾರಣವಾಗಿರುವ 22 ವರ್ಷದ ಮಹ್ಸಾ ಅಮಿನಿ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆಯನ್ನು ಅಧಿಕಾರಿಗಳು ತ್ವರಿತವಾಗಿ ನಡೆಸಬೇಕು ಎಂದು ಅವರು ಹೇಳಿದ್ದಾರೆ.

‘ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹೆಚ್ಚುತ್ತಿರುವ ಸಾವು, ನೋವುಗಳ ವರದಿಗಳ ಬಗ್ಗೆ ನಾವು ಕಳವಳ ವ್ಯಕ್ತಪಡಿಸುತ್ತೇವೆ.ಆಕೆಯ ಸಾವಿನ ಬಗ್ಗೆ ಸ್ವತಂತ್ರ ಪ್ರಾಧಿಕಾರದಿಂದ ತ್ವರಿತ, ನಿಷ್ಪಕ್ಷಪಾತ ಮತ್ತು ಪರಿಣಾಮಕಾರಿ ತನಿಖೆ ಅಗತ್ಯವನ್ನು ಒತ್ತಿ ಹೇಳುತ್ತಿದ್ದೇವೆ’ಎಂದು ವಿಶ್ವಸಂಸ್ಥೆ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇರಾನ್‌ನ 46 ನಗರ, ಪಟ್ಟಣ ಮತ್ತು ಹಳ್ಳಿಗಳಿಗೆ ಪ್ರತಿಭಟನೆ ವ್ಯಾಪಿಸಿದೆ. ಸೆ.17ರಿಂದ ಪ್ರತಿಭಟನೆ ಆರಂಭವಾದಾಗಿನಿಂದ 41 ಪ್ರತಿಭಟನಕಾರರು ಮತ್ತು ಪೊಲೀಸರು ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಮಾಧ್ಯಮ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT