ಬುಧವಾರ, ಸೆಪ್ಟೆಂಬರ್ 22, 2021
24 °C
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಗುಟೆರಸ್‌ ವಿಶ್ವಾಸ

ಅಫ್ಗಾನಿಸ್ತಾನ–ತಾಲಿಬಾನ್‌ ಮಾತುಕತೆಯಿಂದ ಸಂಘರ್ಷ ಶಮನ: ಗುಟೆರಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಅಫ್ಗಾನಿಸ್ತಾನ ಸರ್ಕಾರ ಹಾಗೂ ತಾಲಿಬಾನ್‌ ನಡುವೆ ಈ ವಾರ ದೋಹಾದಲ್ಲಿ ನಡೆಯಲಿರುವ ಮಾತುಕತೆ ಆ ದೇಶದಲ್ಲಿನ ಸಂಘರ್ಷವನ್ನು ಶಮನ ಮಾಡಲಿದೆ ಎಂಬ ವಿಶ್ವಾಸವನ್ನು ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿರುವ ಗುಟೆರಸ್‌ ಅವರ ವಕ್ತಾರ ಸ್ಟೀಫನ್‌ ದುಜಾರಿಕ್‌,  ‘ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆಗಳ ಬಗ್ಗೆ ಗುಟೆರಸ್‌ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಆ ದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪ್ರಯತ್ನಕ್ಕೆ ಜಾಗತಿಕ ನಾಯಕರು ಕೈಜೋಡಿಸಬೇಕು’ ಎಂದರು.

‘ಹೇರತ್‌ ಹಾಗೂ ಕಂದಹಾರ್‌ಗಳನ್ನು ತಾಲಿಬಾನ್‌ ವಶಪಡಿಸಿಕೊಂಡಿದೆ. ಇದರೊಂದಿಗೆ ಸಣ್ಣ ನಗರಗಳು ಹಾಗೂ ಪಟ್ಟಣ ಪ್ರದೇಶಗಳಿಗೂ ಸಂಘರ್ಷ ವ್ಯಾಪಿಸುತ್ತಿರುವುದು ಕಳವಳಕಾರಿ. ಈ ಬೆಳವಣಿಗೆಯಿಂದಾಗಿ ನಾಗರಿಕರು ಹೆಚ್ಚು ಸಮಸ್ಯೆ ಎದುರಿಸಬೇಕಾಗುತ್ತದೆ’ ಎಂದು ಅವರು ಹೇಳಿದರು.

‘ಕಾಬೂಲ್‌ ನಗರವನ್ನು ತಾಲಿಬಾನ್‌ ವಶಪಡಿಸಿಕೊಂಡ ನಂತರ ಸಂಘರ್ಷ ತೀವ್ರವಾಗುವ ಆತಂಕವಿದೆ’ ಎಂದೂ ಹೇಳಿದರು.

ಇವನ್ನೂ ಓದಿ


ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು