ಶನಿವಾರ, ಮೇ 28, 2022
21 °C

ಕಾಶ್ಮೀರ ಸಮಸ್ಯೆಗೆ ಶಾಂತಿಯುತ ಪರಿಹಾರ: ಆಂಟೊನಿಯೊ ಗುಟೆರಸ್‌ ವಿಶ್ವಾಸ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಶ್ಮೀರ ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಬಹುದು ಎಂದು ತಾವು ಭಾವಿಸುವುದಾಗಿ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ಶುಕ್ರವಾರ ಹೇಳಿದ್ದಾರೆ. 

ಇಲ್ಲಿ ನಡೆದ ಮಾಧ್ಯಮಗೋಷ್ಠಿಯೊಂದರಲ್ಲಿ ಪಾಕಿಸ್ತಾನದ ಪತ್ರಕರ್ತರೊಬ್ಬರು ಕಾಶ್ಮೀರ ವಿಷಯಕ್ಕೆ ಸಂಬಂಧಿಸಿ ಕೇಳಿದ ಪ್ರಶ್ನೆಗೆ ಗುಟೆರಸ್‌ ಈ ರೀತಿ ಪ್ರತಿಕ್ರಿಯಿಸಿದರು.

‘ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ನಾನು ಹಲವು ಬಾರಿ ಉತ್ತಮ ಸಲಹೆಗಳನ್ನು ನೀಡಿದ್ದೇನೆ. ಇದು ಶಾಂತಿಯುತವಾಗಿ ಪರಿಹರಿಸಬಹುದಾದ ವಿಷಯವಾಗಿದೆ. ಕಾಶ್ಮೀರ ಪರಿಸ್ಥಿತಿಯು ಬದಲಾಗಬೇಕಿದ್ದು, ಅಲ್ಲಿ ಮಾನವ ಹಕ್ಕುಗಳನ್ನು ಗೌರವಿಸಬೇಕು. ಜನರಿಗೆ ಶಾಂತಿ ಮತ್ತು ಭದ್ರತೆಯಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಬೇಕು ಎಂದು ನಾವು ಭಾವಿಸುತ್ತೇವೆ’ ಎಂದು ಅವರು ಹೇಳಿದರು. 

ಕಾಶ್ಮೀರ ವಿಚಾರದಲ್ಲಿ ಯಾವುದೇ ತೃತೀಯ ಪಕ್ಷದ ಮಧ್ಯಸ್ಥಿಕೆಯನ್ನು ಭಾರತ ಖಡಾಖಂಡಿತವಾಗಿ ವಿರೋಧಿಸುತ್ತಲೇ ಬಂದಿದ್ದು, ಈ ಸಮಸ್ಯೆಯನ್ನು ಉಭಯ ದೇಶಗಳು ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳಬಹುದು, ಬೇರೆ ಯಾರ ನೆರವೂ ಅಗತ್ಯವಿಲ್ಲ ಎಂದು ದಶಕಗಳಿಂದ ಹೇಳುತ್ತ ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು