ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಂಪ್ ಅನುಯಾಯಿಗಳ ದಾಂದಲೆ; ವಿಶ್ವಸಂಸ್ಥೆಯ ನಾಯಕರ ಬೇಸರ

Last Updated 7 ಜನವರಿ 2021, 6:43 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಅಧ್ಯಕ್ಷೀಯ ಚುನಾವಣೆಯ ಎಲೆಕ್ಟ್ರೋಲ್ ಮತಗಳ ಎಣಿಕೆ ಮಾಡಿ, ವಿಜೇತ ಅಭ್ಯರ್ಥಿಗಳನ್ನು ಪ್ರಮಾಣೀಕರಿಸುವ ವೇಳೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಪರ ಬೆಂಬಲಿಗರು ವಾಷಿಂಗ್ಟನ್‌ನಲ್ಲಿ ನಡೆಸಿರುವ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆಯಲ್ಲಿನ ಪ್ರಮುಖ ನಾಯಕರು ತೀವ್ರ ಬೇಸರ ಹಾಗೂ ಕಳವಳ ವ್ಯಕ್ತಪಡಿಸಿದ್ದಾರೆ.

‘ಅಮೆರಿಕದ ರಾಜಧಾನಿ ವಾಷಿಂಗ್ಟನ್‌ ಡಿ.ಸಿ ಯಲ್ಲಿ ನಡೆದಿರುವ ಘಟನೆಗಳಿಂದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ತೀವ್ರ ಬೇಸರಗೊಂಡಿದ್ದಾರೆ‘ ಎಂದು ಪ್ರಧಾನ ಕಾರ್ಯದರ್ಶಿಯವರ ವಕ್ತಾರ ಸ್ಟೀಫನ್ ಡುಜಾರಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂಥ ಪರಿಸ್ಥಿತಿಯಲ್ಲಿ ರಾಜಕೀಯ ನಾಯಕರು ತಮ್ಮ ಬೆಂಬಲಿಗರನ್ನು ನಿಯಂತ್ರಿಸಿ, ಹಿಂಸಾಚಾರ ನಡೆಯದಂತೆ ತಪ್ಪಿಸಬೇಕು. ಈ ಮೂಲಕ ಪ್ರಜಾಪ್ರಭುತ್ವದ ತತ್ವ ಹಾಗೂ ಕಾನೂನಿನ ನಿಯಮಗಳನ್ನು ಗೌರವಿಸುವುದು ಬಹಳ ಮುಖ್ಯವಾಗುತ್ತದೆ‘ ಎಂದು ವಿಶ್ವಸಂಸ್ಥೆಯ ಪ್ರಮುಖ ನಾಯಕರು ಹೇಳಿದ್ದಾರೆ.

ಈ ಘಟನೆ ಬಗ್ಗೆ ಟ್ವೀಟ್ ಮಾಡಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನದ ಅಧ್ಯಕ್ಷ ವೋಲ್ಕಾನ್ ಬೊಜ್ಕಿರ್, ‘ವಾಷಿಂಗ್ಟನ್‌ನಲ್ಲಿ ನಡೆದ ಘಟನೆಯಿಂದ ತೀವ್ರ ಬೇಸರವಾಗಿದೆ‘ ಎಂದು ಪೋಸ್ಟ್ ಮಾಡಿದ್ದಾರೆ. ‘ಪ್ರಜಾಪ್ರಭುತ್ವ ಹೊಂದಿರುವ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಅಮೆರಿಕವೂ ಒಂದಾಗಿದೆ. ಇಂಥ ನಿರ್ಣಾಯಕ ಸಮಯದಲ್ಲಿ ನಮ್ಮ ಆತಿಥೇಯ ದೇಶದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಶಾಂತಿ ಮತ್ತು ಗೌರವವು ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬುತ್ತೇನೆ‘ ಎಂದು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಜೋ ಬೈಡನ್ ಮತ್ತು ಕಮಲಾ ಹ್ಯಾರಿಸ್ ಅವರ ಗೆಲುವನ್ನು ಪ್ರಮಾಣೀಕರಿಸಲು ಜನಪ್ರತಿನಿಧಿಗಳು ಎಲೆಕ್ಟ್ರೊಲ್ ಕಾಲೇಜ್ ಮತಗಳನ್ನು ಎಣಿಸುವ ವೇಳೆ, ಹಾಲಿ ಅಧ್ಯಕ್ಷ ಟ್ರಂಪ್ ಬೆಂಬಲಿಗರು ದಾಂದಲೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT