ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವೀಯತೆ ದೃಷ್ಟಿಯಿಂದ ಸಂಘರ್ಷ ನಿಲ್ಲಿಸುವಂತೆ ಪುಟಿನ್‌ಗೆ ವಿಶ್ವಸಂಸ್ಥೆ ಮನವಿ

Last Updated 24 ಫೆಬ್ರುವರಿ 2022, 8:44 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಉಕ್ರೇನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಮಾನವೀಯತೆಯ ದೃಷ್ಟಿಯಿಂದ ನಿಲ್ಲಿಸುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಮನವಿ ಮಾಡಿದ್ದಾರೆ.

ಭದ್ರತಾ ಮಂಡಳಿಯ ತುರ್ತು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಉಕ್ರೇನ್ ವಿರುದ್ಧ ರಷ್ಯಾ ಮಿಲಿಟರಿ ಕಾರ್ಯಾಚರಣೆ ಘೋಷಣೆ ಬಗ್ಗೆ ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದರು. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ ನನ್ನ ಅವಧಿಯಲ್ಲಿ ಇಂದು ಅತ್ಯಂತ ದುಃಖದ ದಿನ ಎಂದು ಬಣ್ಣಿಸಿದರು.

‘ರಷ್ಯಾ ಅಧ್ಯಕ್ಷ ಪುಟಿನ್ ಅವರೇ, ಮಾನವೀಯತೆ ದೃಷ್ಟಿಯಿಂದ ನಿಮ್ಮ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಿ’ ಎಂದು ಅವರು ಮನವಿ ಮಾಡಿದ್ದಾರೆ.

'ಮಾನವೀಯತೆಯ ದೃಷ್ಟಿಯಿಂದ, ಶತಮಾನದ ಆರಂಭದಿಂದಲೂ ನಡೆಯದ ಅತ್ಯಂತ ಕೆಟ್ಟ ಯುದ್ಧವನ್ನು ಯುರೋಪಿನಲ್ಲಿ ಪ್ರಾರಂಭಿಸಲು ಅನುಮತಿಸಬೇಡಿ’ಎಂದು ಅವರು ಹೇಳಿದ್ದಾರೆ.

ಉಕ್ರೇನ್ ವಿರುದ್ಧ ಪುಟಿನ್ ಯುದ್ಧ ಘೋಷಣೆಯ ಬೆನ್ನಲ್ಲೇ ರಾಜಧಾನಿ ಕೈವ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಭಾರೀ ಸ್ಫೋಟದ ಸದ್ದು ಕೇಳಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT