ಗುರುವಾರ , ಜನವರಿ 21, 2021
27 °C

ಕೋವಿಡ್‌ ಲಸಿಕೆ: ಈ ವರ್ಷದಲ್ಲೇ ಹರ್ಡ್ ಇಮ್ಯುನಿಟಿ ಸಾಧ್ಯವಿಲ್ಲ: ಸೌಮ್ಯಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಿನೀವಾ: ‘ಕೋವಿಡ್‌ 19‘ ತಡೆಗಾಗಿ ವಿಶ್ವದ ಹಲವು ರಾಷ್ಟ್ರಗಳು ಲಸಿಕೆ ನೀಡುವ ಪ್ರಕ್ರಿಯೆ ಆರಂಭಿಸಿದರೂ, ಈ ವರ್ಷದಲ್ಲೇ ಸಮುದಾಯದಲ್ಲಿ ರೋಗನಿರೋಧಕ ಶಕ್ತಿ (ಹರ್ಡ್‌ ಇಮ್ಯುನಿಟಿ) ಹೆಚ್ಚಾಗುವ ಸಾಧ್ಯತೆ ಕಡಿಮೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯಾ ಸ್ವಾಮಿನಾಥನ್ ಎಚ್ಚರಿಸಿದ್ದಾರೆ.

ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇತ್ತೀಚೆಗೆ ಬ್ರಿಟನ್, ಅಮೆರಿಕ, ಫ್ರಾನ್ಸ್, ಕೆನಡಾ, ಜರ್ಮನಿ, ಇಸ್ರೇಲ್, ನೆದರ್ಲ್ಯಾಂಡ್‌ ಸೇರಿಸಂತೆ ವಿವಿಧ ರಾಷ್ಟ್ರಗಳು ತಮ್ಮ ಲಕ್ಷಾಂತರ ನಾಗರಿಕರಿಗೆ ಕೊರೊನಾ ವಿರುದ್ಧದ ಲಸಿಕೆ ನೀಡಲು ಪ್ರಾರಂಭಿಸಿವೆ. ಈ ಲಸಿಕೆ ದುರ್ಬಲರನ್ನು ರಕ್ಷಿಸಲು ಆರಂಭಿಸಿದರೂ, 2021ರ ಅವಧಿಯಲ್ಲಿ ವಿಶ್ವದಾದ್ಯಂತ ಸಮುದಾಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಾಧ್ಯವಿಲ್ಲ‘ ಎಂದು ಸ್ಪಷ್ಟಪಡಿಸಿದರು.

‘ವಿಶ್ವದ ಒಂದೆರಡು ಭಾಗಗಳಲ್ಲಿ ಹರ್ಡ್‌ ಇಮ್ಯುನಿಟಿ ಸಾಧ್ಯವಾದರೂ, ವಿಶ್ವದಾದ್ಯಂತವಿರುವ ಎಲ್ಲರನ್ನೂ ಒಂದೇ ವರ್ಷದಲ್ಲಿ ರಕ್ಷಿಸಲು ಸಾಧ್ಯವಾಗುವುದಿಲ್ಲ‘ ಎಂದು ತಿಳಿಸಿದರು.

ಹೀಗಾಗಿ ನಿರ್ಣಾಯಕ ಹಂತದಲ್ಲಿರುವ ರಾಷ್ಟ್ರಗಳು, ತಮ್ಮ ದೇಶದ ಜನರ ಭವಿಷ್ಯದ ದೃಷ್ಟಿಯಿಂದ, ಲಸಿಕೆಯ ಜತೆಗೆ, ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸೌಮ್ಯಾ ಸಲಹೆ ನೀಡಿದರು.

ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕರ ಸಲಹೆಗಾರ ಡಾ.ಬ್ರೂಸ್ ಐಲ್ವರ್ಡ್‌, ‘ಈ ತಿಂಗಳ ಅಂತ್ಯದಲ್ಲಿ ಅಥವಾ ಫೆಬ್ರುವರಿ ಆಂಭದಲ್ಲಿ ವಿಶ್ವದ ಕೆಲವು ಬಡ ರಾಷ್ಟ್ರಗಳಲ್ಲಿ  ಕೊರೊನಾ ವಿರುದ್ಧದ ಲಸಿಕೆ ಹಾಕುವ ಅಭಿಯಾನ ಆರಂಭವಾಗಬಹುದೆಂದು ವಿಶ್ವ ಆರೋಗ್ಯ ಸಂಸ್ಥೆ ಆಶಿಸಿದೆ ಎಂದು ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು