ಶುಕ್ರವಾರ, ಅಕ್ಟೋಬರ್ 7, 2022
24 °C

ಪರಮಾಣು ಘಟಕದ ಬಳಿ ಸಂಘರ್ಷ ನಿಲ್ಲಿಸಿ: ವಿಶ್ವಸಂಸ್ಥೆ

ಎಪಿ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಆಗ್ನೇಯ ಉಕ್ರೇನಿನಲ್ಲಿರುವ ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್‌ ಸ್ಥಾವರ ಝಪೋರಿಝ್ಯಾ ಸಮೀಪವೇ ರಷ್ಯಾ ಮತ್ತು ಉಕ್ರೇನ್‌ ದೇಶಗಳು ಸೇನಾ ಚಟುವಟಿಕೆ ನಡೆಸುತ್ತಿರುವುದನ್ನು ವಿಶ್ವಸಂಸ್ಥೆ ಖಂಡಿಸಿದ್ದು, ಈ ಬಗ್ಗೆ ಎಚ್ಚರಿಸಿಕೆ ನೀಡಿದೆ.

ಇದು ಇಡೀ ಪ್ರದೇಶಕ್ಕೆ ಅಪಾಯಕಾರಿಯಾಗಿದ್ದು, ಕೂಡಲೇ ರಷ್ಯಾ ಮತ್ತು ಉಕ್ರೇನ್‌ ಇಲ್ಲಿ ಸಂಘರ್ಷವನ್ನು ನಿಲ್ಲಿಸಬೇಕು ಎಂದು ಕರೆ ನೀಡಿದೆ.

ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ) ಮುಖ್ಯಸ್ಥ ರಫೇಲ್ ಗ್ರೊಸ್ಸಿ, ಝಪೋರಿಝ್ಯಾ ಘಟಕದಲ್ಲಾಗಿರುವ ಹಾನಿಯ ಬಗ್ಗೆ ಪರಮಾಣು ತಜ್ಞರು ಪರಿಶೀಲನೆ ನಡೆಸಲು ಅವಕಾಶ ನೀಡಬೇಕೆಂದು ಉಭಯ ದೇಶಗಳಲ್ಲಿ ಮನವಿ ಮಾಡಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು