ಮ್ಯಾನ್ಮಾರ್‌ನಲ್ಲಿ ಮುಂದುವರಿದ ಪ್ರತಿಭಟನೆ; ಹಿಂಸಾಚಾರದ ಭೀತಿ

ಯಾಂಗೂನ್: ‘ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತದ ವಿರುದ್ಧ ಬುಧವಾರವೂ ಪ್ರತಿಭಟನೆ ಮುಂದುವರಿದಿದೆ. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆಯಿದೆ’ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞರು ಎಚ್ಚರಿಕೆ ನೀಡಿದ್ದಾರೆ.
‘ಯಾಂಗೂನ್‌ಗೆ ಭಾರೀ ಪ್ರಮಾಣದಲ್ಲಿ ಸೇನಾ ಪಡೆಯನ್ನು ಕಳುಹಿಸಲಾಗುತ್ತಿದೆ ಎಂಬ ಮಾಹಿತಿಗಳು ಸಿಕ್ಕಿವೆ’ ಎಂದು ವಿಶ್ವಸಂಸ್ಥೆಯ ವರದಿಗಾರ ಟಾಮ್ ಆಂಡ್ರ್ಯೂಸ್ ಅವರು ತಿಳಿಸಿದ್ದಾರೆ.
‘ಈ ಹಿಂದೆಯೂ ಸೇನೆಯ ಈ ರೀತಿಯ ಚಟುವಟಿಕೆಗಳು ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಎಡೆ ಮಾಡಿಕೊಟ್ಟಿವೆ. ಹತ್ಯೆ, ಸಾಮೂಹಿಕ ಬಂಧನ ಮತ್ತು ನಾಪತ್ತೆಯಾದ ಘಟನೆಗಳೂ ನಡೆದಿವೆ. ಸದ್ಯ ಮ್ಯಾನ್ಮಾರ್‌ನಲ್ಲಿ ಆಗುತ್ತಿರುವ ಬೆಳವಣಿಗೆಗಳು ಇದೇ ಭೀತಿಯನ್ನು ಮೂಡಿಸಿವೆ. ಸೇನೆಯು ತನ್ನ ಪ್ರಜೆಗಳ ವಿರುದ್ಧ ಅಪರಾಧ ಕೃತ್ಯಗಳನ್ನು ನಡೆಸುವ ಸಾಧ್ಯತೆ ಇದೆ’ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಪ್ರಸ್ತಾಪಿಸಲಾಗದೆ.
ಮ್ಯಾನ್ಮಾರ್‌ನ ಹಲವೆಡೆ ಬುಧವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಭಟಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.