ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಹೊಸ ಪ್ರಕರಣಗಳಲ್ಲಿ ಸ್ಥಿರತೆ– ಡಬ್ಲ್ಯುಎಚ್‌ಒ ಅಭಿಮತ

Last Updated 25 ಆಗಸ್ಟ್ 2021, 12:12 IST
ಅಕ್ಷರ ಗಾತ್ರ

ಜಿನಿವಾ: ಜಾಗತಿಕವಾಗಿ ಕಳೆದ ಎರಡು ತಿಂಗಳಿನಿಂದ ಹೊಸ ಕೋವಿಡ್‌–19 ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿತ್ತು. ಈಗ ಸೋಂಕು ಪ್ರಸರಣದಲ್ಲಿ ಸ್ಥಿರತೆ ಕಂಡುಬರುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ.

ಕೋವಿಡ್‌–19 ಪಿಡುಗಿಗೆ ಸಂಬಂಧಿಸಿದ ಸಾಪ್ತಾಹಿಕ ವರದಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಮಂಗಳವಾರ ಬಿಡುಗಡೆ ಮಾಡಿದೆ.

ಸದ್ಯ ಹೊಸ ಕೋವಿಡ್‌–19 ಪ್ರಕರಣಗಳ ಸಂಖ್ಯೆ 45 ಲಕ್ಷ ಆಸುಪಾಸಿನಲ್ಲಿದ್ದು, ಈ ಹಂತಕ್ಕೇ ಸ್ಥಿರತೆ ಕಾಯ್ದುಕೊಳ್ಳುವ ಸಾಧ್ಯತೆ ಇದೆ. ಪಶ್ಚಿಮ ಪೆಸಿಫಿಕ್‌ ಪ್ರದೇಶದಲ್ಲಿ ಶೇ 20ರಷ್ಟು ಹಾಗೂ ಅಮೆರಿಕದಲ್ಲಿ ಶೇ 8ರಷ್ಟು ಹೆಚ್ಚಳ ಕಂಡು ಬಂದಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಅಮೆರಿಕ, ಇರಾನ್‌, ಭಾರತ, ಬ್ರಿಟನ್‌ ಹಾಗೂ ಬ್ರೆಜಿಲ್‌ನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಗರಿಷ್ಠ ಪ್ರಮಾಣದಲ್ಲಿದೆ. ಕಳೆದ ವಾರದ ಅವಧಿಯಲ್ಲಿ ಜಾಗತಿಕವಾಗಿ 68,000 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅಮೆರಿಕ ಹಾಗೂ ಯುರೋಪ್‌ನಲ್ಲಿ ಮರಣ ಪ್ರಮಾಣದಲ್ಲಿ ಶೇ 10ರಷ್ಟು ಹೆಚ್ಚಳ ಕಂಡು ಬಂದಿದೆ ಎಂದೂ ವರದಿಯಲ್ಲಿ ವಿವರಿಸಲಾಗಿದೆ.

‘ಕೊರೊನಾ ವೈರಸ್‌ ಸೋಂಕಿನ ವಿರುದ್ಧ ಲಸಿಕೆಗಳು ರಕ್ಷಣೆ ನೀಡುತ್ತವೆ ಎಂಬುದು ಇತ್ತೀಚಿನ ಕೆಲ ಅಧ್ಯಯನಗಳಿಂದ ತಿಳಿದುಬಂದಿದೆ. ಆದರೆ, ರೂಪಾಂತರ ಡೆಲ್ಟಾ ತಳಿಯ ಸೋಂಕಿನ ವಿರುದ್ಧ ಈ ಲಸಿಕೆಗಳ ಪರಿಣಾಮ ಕಡಿಮೆ ಎಂಬುದು ಸಹ ತಿಳಿದುಬಂದಿದೆ ಎಂದು ಸಂಸ್ಥೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT