ಮಂಗಳವಾರ, ಸೆಪ್ಟೆಂಬರ್ 22, 2020
25 °C

ಸುಡಾನ್‌ ಪ್ರವಾಹ | 50,000 ಕ್ಕೂ ಹೆಚ್ಚು ಜನರಿಗೆ ಸಂಕಷ್ಟ: ವಿಶ್ವಸಂಸ್ಥೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಕೈರೊ: ಸುಡಾನ್‌ನಲ್ಲಿ  ಸಂಭವಿಸಿದ ಪ್ರವಾಹದಿಂದ 50 ಸಾವಿರಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಹಲವಾರು ಕಟ್ಟಡಗಳು ನಾಶವಾಗಿವೆ ಎಂದು ವಿಶ್ವಸಂಸ್ಥೆ ಹೇಳಿದೆ.

ಕಳೆದ ಹಲವು ದಿನಗಳಿಂದ ಸುಡಾನ್‌ನ 14 ಪ್ರಾಂತ್ಯಗಳಲ್ಲಿ ಪ್ರವಾಹ ಸಂಭವಿಸಿದ್ದು, ಸಂತ್ರಸ್ತರು ಸೂರು ಮತ್ತು ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಕಳೆದ ಒಂದೆರಡು ದಿನಗಳಿಂದ ಉತ್ತರ ಡಾರ್ಫರ್, ವೈಟ್‌ ನೈಲ್‌, ಸೆನಾರ್‌, ಕಲ್ಸಾಲಾ ರಾಜ್ಯಗಳಲ್ಲೂ ಪ್ರವಾಹ ಉಂಟಾಗಿದೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮಿತಿ ತಿಳಿಸಿದೆ.

ಉತ್ತರ ಡಾರ್ಫರ್‌ನ ಅಲ್‌ ಲಲೈತ್‌ ‍‍ಪ್ರದೇಶದಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿದ್ದ 600 ಮಂದಿಯನ್ನು ಸ್ಥಳಾಂತರಿಸಲಾಗಿದ್ದು, ಅವರಿಗೆ ಆಹಾರ ಮತ್ತು ಆಶ್ರಯದ ಅವಶ್ಯಕತೆ ಇದೆ’ ಎಂದು ತಿಳಿಸಿದೆ.

ದೇಶದಲ್ಲಿ ಆಗಸ್ಟ್‌ ಮತ್ತು ಸೆಪ್ಟೆಂಬರ್‌ ತಿಂಗಳಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸುಡಾನ್‌ನಲ್ಲಿ ಮತ್ತೆ ಪ್ರವಾಹ ಸಂಭವಿಸುವ ನಿರೀಕ್ಷೆ ಇದೆ ಎಂದು ಸುಡಾನ್‌ನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು