ಸೋಮವಾರ, ಆಗಸ್ಟ್ 2, 2021
25 °C

ಭಾರತಕ್ಕೆ ನೀಡುತ್ತಿರುವ ನೆರವು ಹೆಚ್ಚಳಕ್ಕೆ ಬದ್ಧ: ವಿಶ್ವಸಂಸ್ಥೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಕೋವಿಡ್‌–19 ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ನೀಡುತ್ತಿರುವ ನೆರವನ್ನು ಹೆಚ್ಚಿಸಲು ಸಂಸ್ಥೆ ಸಿದ್ಧವಾಗಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌ ಹೇಳಿದ್ದಾರೆ.

‘ಭಾರತದಲ್ಲಿ 1.8 ಕೋಟಿಗೂ ಅಧಿಕ ಜನರು ಕೋವಿಡ್‌ನಿಂದ ಬಳಲುತ್ತಿದ್ದು, 2 ಲಕ್ಷಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಇಂಥ ಕಠಿಣ ಸಮಯದಲ್ಲಿ ವಿಶ್ವಸಂಸ್ಥೆಯು ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ನಿಲ್ಲಲಿದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಗುಟೆರಸ್‌ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್‌.ತಿರುಮೂರ್ತಿ, ‘ಭಾರತಕ್ಕೆ ನೆರವು ನೀಡುತ್ತಿರುವ ವಿಶ್ವಸಂಸ್ಥೆಗೆ ಅಭಿನಂದನೆಗಳು’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು