ಮಂಗಳವಾರ, ಜೂನ್ 28, 2022
28 °C

ವಿಶ್ವಸಂಸ್ಥೆ ಸಾಮಾನ ಸಭೆ ಅಧ್ಯಕ್ಷ ಶಹೀದ್‌ ಮುಖ್ಯಕಾರ್ಯದರ್ಶಿಯಾಗಿ ನಾಯ್ಡು ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಚುನಾಯಿತ ಅಧ್ಯಕ್ಷ ಅಬ್ದುಲ್ಲಾ ಶಹೀದ್‌ ಅವರು, ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿಯ ಕಾಯಂ ಉಪಪ್ರತಿನಿಧಿಯಾಗಿರುವ ಕೆ.ನಾಗರಾಜ್‌ ನಾಯ್ಡು ಅವರನ್ನು ತಮ್ಮ ಕಚೇರಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದಾರೆ.

‘ಥಿಲ್‌ಮೀಜಾ ಹುಸೇನ್‌ ಅವರನ್ನು ಸಾಮಾನ್ಯಸಭೆ ಅಧ್ಯಕ್ಷರ ವಿಶೇಷ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ’ ಎಂದು ಅಬ್ದುಲ್ಲಾ ಅವರು ತಿಳಿಸಿದ್ದಾರೆ.

‘ಥಿಲ್‌ಮೀಜಾ ಹುಸೇನ್‌ ಹಾಗೂ ನಾಗರಾಜ್ ನಾಯ್ಡು ಅವರು ವಿಶ್ವಸಂಸ್ಥೆಯ ಅಧ್ಯಕ್ಷನಾಗಿ ನನ್ನ ಮುನ್ನೋಟ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸುವರು’ ಎಂದೂ ಅವರು ಟ್ವೀಟ್‌ ಮಾಡಿದ್ದಾರೆ.

ಹುಸೇನ್‌ ಅವರು ವಿಶ್ವಸಂಸ್ಥೆಯಲ್ಲಿ ಮಾಲ್ಡೀವ್ಸ್‌ನ ಕಾಯಂ ರಾಯಭಾರಿಯಾಗಿದ್ದಾರೆ.

‘ಸಾಮಾನ್ಯಸಭೆಯ ಚುನಾಯಿತ ಅಧ್ಯಕ್ಷರ ಕಚೇರಿಯ ಮುಖ್ಯಸ್ಥ ಹುದ್ದೆಗೆ ನೇಮಕಗೊಂಡಿರುವುದು ನನಗೆ ದೊರೆತ ವಿಶೇಷ ಗೌರವ ಎಂದು ಭಾವಿಸುವೆ. ಅಧ್ಯಕ್ಷರೊಂದಿಗೆ ಕಾರ್ಯನಿರ್ವಹಿಸಲು ಉತ್ಸುಕನಾಗಿದ್ದೇನೆ’ ಎಂದು ನಾಯ್ದು ಪ್ರತಿಕ್ರಿಯಿಸಿದರು.

ಶಹೀದ್ ಅವರು ಮಾಲ್ಡೀವ್ಸ್‌ನ ವಿದೇಶಾಂಗ ಸಚಿವರಾಗಿದ್ದು, ವಿಶ್ವಸಂಸ್ಥೆಯ ಮುಂದಿನ ಸಾಮಾನ್ಯಸಭೆಯ ಅಧ್ಯಕ್ಷ ಸ್ಥಾನಕ್ಕೆ ಜೂನ್ 7ರಂದು ನಡೆದ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಸಾಮಾನ್ಯಸಭೆ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು