ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ–ಉಕ್ರೇನ್ ಸಂಘರ್ಷ: ಪುಟಿನ್‌, ಝೆಲೆನ್‌ಸ್ಕಿ ಜೊತೆ ಗುಟೆರಸ್ ಸಭೆ

Last Updated 23 ಏಪ್ರಿಲ್ 2022, 3:17 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸ್‌ ಅವರು ರಷ್ಯಾ ಹಾಗೂ ಉಕ್ರೇನ್‌ಗೆ ಭೇಟಿ ನೀಡಲಿದ್ದು, ಆ ದೇಶಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ವಿಶ್ವಸಂಸ್ಥೆ ಪ್ರಕಟಿಸಿದೆ.

'ಮಹಾಪ್ರಧಾನ ಕಾರ್ಯದರ್ಶಿ ಅವರು ಮುಂದಿನವಾರ ಉಕ್ರೇನ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿನಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಮತ್ತು ವಿದೇಶಾಂಗ ಸಚಿವ ಡಿಮಿಟ್ರೊ ಕುಲೇಬಾ ಅವರನ್ನು ಏಪ್ರಿಲ್‌ 28ರಂದು ಭೇಟಿ ಮಾಡಲಿದ್ದಾರೆ. ಹಾಗೆಯೇ,ಉಕ್ರೇನ್‌ನ ನಾಗರಿಕರಿಗೆ ಮಾನವೀಯ ನೆರವನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲು ಅವರು ಯುಎನ್ ಏಜೆನ್ಸಿಗಳ ಸಿಬ್ಬಂದಿಯನ್ನೂ ಭೇಟಿಯಾಗಲಿದ್ದಾರೆ' ಎಂದು ವಿಶ್ವಸಂಸ್ಥೆ ಹೇಳಿದೆ.

ಇದಕ್ಕೂ ಕೆಲಗಂಟೆಗಳ ಮುನ್ನ, ಗುಟೆರಸ್‌ ಅವರು ಏಪ್ರಿಲ್‌ 26ರಂದು ಮಾಸ್ಕೋಗೆ ತೆರಳಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ ಮತ್ತು ಅಲ್ಲಿನ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಗುಟೆರಸ್‌ ಅವರ ವಕ್ತಾರೆ ಎರಿ ಕನೆಕೊ ಪ್ರಕಟಿಸಿದ್ದರು.

ಅಮೆರಿಕ ಹಾಗೂ ನ್ಯಾಟೊ ಮಿತ್ರರಾಷ್ಟ್ರಗಳ ತೀವ್ರ ವಿರೋಧದ ನಡುವೆಯೂರಷ್ಯಾ ಸೇನೆ, ಫೆ. 25ರಂದು ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಆರಂಭಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT