ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ನೆರವು: ಅಮೆರಿಕದಿಂದ ಭಾರತಕ್ಕೆ ಬರಬೇಕಿದ್ದ ವಿಮಾನಗಳು ವಿಳಂಬ

Last Updated 4 ಮೇ 2021, 1:05 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಕೋವಿಡ್‌–19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ವೈದ್ಯಕೀಯ ಪರಿಹಾರ ಸಾಮಗ್ರಿಗಳನ್ನು ರವಾನಿಸುವ ಮೂಲಕ ಅಮೆರಿಕ ಸಹಾಯ ಹಸ್ತ ಚಾಚಿದೆ.

ಏತನ್ಮಧ್ಯೆ, ಅಮೆರಿಕದಿಂದ ಕೋವಿಡ್‌ ವೈದ್ಯಕೀಯ ಪರಿಹಾರ ಸಾಮಗ್ರಿಗಳನ್ನು ಹೊತ್ತು ತರಬೇಕಿದ್ದ ಎರಡು ವಿಮಾನಗಳು ನಿರ್ವಹಣೆ ಸಮಸ್ಯೆಯಿಂದಾಗಿ ಭಾರತಕ್ಕೆ ಬಂದಿಳಿಯುವುದು ತಡವಾಗುತ್ತದೆ ಎಂದು ಅಮೆರಿಕದ ರಕ್ಷಣಾ ಇಲಾಖೆ ಮಾಹಿತಿ ನೀಡಿದೆ.

ಕಳೆದ ಶುಕ್ರವಾರ ಅಮೆರಿಕದ ಟ್ರಾವಿಸ್‌ ವಾಯುನೆಲೆಯಿಂದ ಪ್ರಯಾಣ ಆರಂಭಿಸಿದ್ದ ವಿಶ್ವದ ಬೃಹತ್‌ ಯುದ್ಧವಿಮಾನವು ₹740 ಕೋಟಿ ಮೌಲ್ಯದ (100 ದಶಲಕ್ಷ ಡಾಲರ್‌) ಪರಿಹಾರ ಸಾಮಗ್ರಿಗಳನ್ನು ಹೊತ್ತು ಭಾರತಕ್ಕೆ ಬಂದಿಳಿದಿತ್ತು.

ಆಮ್ಲಜನಕ ಸಿಲಿಂಡರ್, ಲಸಿಕೆ ತಯಾರಿಕೆಗೆ ಬೇಕಾದ ಕಚ್ಚಾ ಸಾಮಗ್ರಿಗಳು ಸೇರಿದಂತೆ ಹಲವು ವೈದ್ಯಕೀಯ ಪರಿಹಾರ ಸಾಮಗ್ರಿಗಳನ್ನು ಭಾರತಕ್ಕೆ ಅಮೆರಿಕ ಈಗಾಗಲೇ ರವಾನಿಸಿದೆ.

ಭಾರತಕ್ಕೆ ರಷ್ಯಾ, ಕೆನಡಾ, ದುಬೈ, ತೈವಾನ್ ಸೇರಿದಂತೆ ಹಲವು ಜಾಗತಿಕ ರಾಷ್ಟ್ರಗಳು ನೆರವು ನೀಡಲು ಮುಂದಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT