ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈವ್‌ ವಿಡಿಯೊದಲ್ಲಿ ನೇಪಾಳ ವಿಮಾನ ಅಪಘಾತದ ದೃಶ್ಯ: ಚೀರಾಟ, ಬೆಂಕಿಯ ಜ್ವಾಲೆ

Last Updated 16 ಜನವರಿ 2023, 1:59 IST
ಅಕ್ಷರ ಗಾತ್ರ

ಕಠ್ಮಂಡು: ಯೇತಿ ಏರ್‌ಲೈನ್ಸ್‌ಗೆ ಸೇರಿದ ಎಟಿಆರ್–72 ವಿಮಾನ ನೆಲಕ್ಕೆ ಅಪ್ಪಳಿಸುವ ಮುನ್ನ ಪ್ರಯಾಣಿಕರೊಬ್ಬರು ಫೇಸ್‌ಬುಕ್‌ ಲೈವ್‌ ಮಾಡಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕೆಲವೇ ಸೆಕೆಂಡ್‌ಗಳ ಈ ವಿಡಿಯೊದಲ್ಲಿ ಪ್ರಯಾಣಿಕರ ಚೀರಾಟ ಹಾಗೂ ಬೆಂಕಿಯ ಜ್ವಾಲೆಗಳನ್ನು ಕಾಣಬಹುದು.

ಉತ್ತರಪ್ರದೇಶದ ಸೋನು ಜೈಸ್ವಾಲ್‌ ಎಂಬುವರು ಫೇಸ್‌ಬುಕ್‌ ಲೈವ್‌ ಮಾಡಿದ್ದರು.

ಅವಘಡದಲ್ಲಿ ಮೃತಪಟ್ಟವರಲ್ಲಿ ಐವರು ಭಾರತೀಯರು ಇದ್ದು, ಅವರಲ್ಲಿ ನಾಲ್ವರು ಪ್ಯಾರಾಗ್ಲೈಡಿಂಗ್‌ಗೆ ಪೊಖರಾಗೆ ಹೊರಟಿದ್ದರು ಎಂದು ಯೇತಿ ಏರ್‌ಲೈನ್ಸ್‌ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೃತ ಭಾರತೀಯರನ್ನು ಅಭಿಷೇಕ್ ಕುಶ್ವಾಹಾ (25), ವಿಶಾಲ್‌ ಶರ್ಮಾ (22), ಅನಿಲ್ ಕುಮಾರ್ ರಾಜ್ಬರ್ (27), ಸೋನು ಜೈಸ್ವಾಲ್‌ (35) ಮತ್ತು ಸಂಜಯ್‌ ಜೈಸ್ವಾಲ್‌ ಎಂದು ಗುರುತಿಸಲಾಗಿದೆ. ಇವರಲ್ಲಿ ನಾಲ್ವರು ಉತ್ತರ ಪ್ರದೇಶದ ಗಾಜಿಪುರದವರು.

ನೇಪಾಳದ ಪೊಖರಾದಲ್ಲಿ ಪ್ರಯಾಣಿಕ ವಿಮಾನವೊಂದು ಭಾನುವಾರ ಬೆಳಿಗ್ಗೆ ಪತನವಾಗಿದ್ದು, 68 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT