ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಂಗ್‌ಕಾಂಗ್‌ನಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಳ

Last Updated 18 ಫೆಬ್ರುವರಿ 2022, 14:13 IST
ಅಕ್ಷರ ಗಾತ್ರ

ಹಾಂಗ್‌ಕಾಂಗ್‌: ನಗರದಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳದ ಹಿನ್ನೆಲೆ ಮಾರ್ಚ್‌ನಲ್ಲಿ ನಡೆಯಬೇಕಿದ್ದ ಚೀಫ್‌ ಎಕ್ಸಿಕ್ಯುಟಿವ್‌ ಆಯ್ಕೆ ಚುನಾವಣೆಯನ್ನು ಮೇ ತಿಂಗಳಿಗೆ ಮುಂದೂಡಲಾಗಿದೆ ಎಂದು ನಗರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ಯಾರಿ ಲ್ಯಾಮ್‌ ಶುಕ್ರವಾರ ಹೇಳಿದ್ದಾರೆ.

ಚುನಾವಣೆಯ ನಾಮನಿರ್ದೇಶನ ಅವಧಿಯು ಏಪ್ರಿಲ್‌ 3–16 ರವರೆಗೆ ನಡೆಯಲಿದೆ. ಇದರಿಂದ ಚುನಾವಣೆಯು ಮೇ 8 ರವರೆಗೂ ತಡವಾಗಲಿದೆ ಎಂದು ಅವರು ಸುದ್ದಿಗಾರರಿಗೆ ಹೇಳಿದರು.

‘ಬೀಜಿಂಗ್‌ ಸರ್ಕಾರದ ಒಪ್ಪಿಗೆಯ ಮೇರೆಗೆ ತುರ್ತು ಅಧಿಕಾರವನ್ನು ಉಪಯೋಗಿಸಿ ಚುನಾವಣೆಯನ್ನು ಮುಂದೂಡಲಾಗಿದೆ. ಇದರಿಂದ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟನ್ನು ನಾವು ಎದುರಿಸಲು ಸಾಧ್ಯವಾಗುತ್ತದೆ ಎಂದು ಆಶಿಸುತ್ತೇನೆ. ಒಂದು ವೇಳೆ ಆರೋಗ್ಯ ಬಿಕ್ಕಟ್ಟು ಮತ್ತೆ ಬಿಗಡಾಯಿಸಿದರೆ ಚುನಾವಣೆಯನ್ನು ಮತ್ತೊಮ್ಮೆ ಮುಂದೂಡುವ ಸಾಧ್ಯತೆ ಇದೆ’ ಎಂದು ಅವರು ಸುದ್ದಿಗಾರರಿಗೆ ಹೇಳಿದರು.

ಹಾಂಗ್‌ಕಾಂಗ್‌ನಲ್ಲಿ ಸೋಂಕು ಹೆಚ್ಚಳದಿಂದ ಕ್ವಾರಂಟೈನ್‌ ಸೌಲಭ್ಯಗಳನ್ನೆಲ್ಲಾ ಬಳಸಿಕೊಳ್ಳಲಾಗುತ್ತಿದೆ. ಆಸ್ಪತ್ರೆಗಳ ಹಾಸಿಗೆಗಳು ಶೇ 95 ರಷ್ಟು ಭರ್ತಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT