ಗುರುವಾರ , ಅಕ್ಟೋಬರ್ 6, 2022
24 °C

ಜಪಾನ್‌ನಲ್ಲಿ ಭೂಕುಸಿತ: 80 ಮಂದಿಯ ಪತ್ತೆಗೆ ಶೋಧ ಕಾರ್ಯಾಚರಣೆ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ಟೋಕಿಯೊ: ಜಪಾನ್‌ನ ಅಟಾಮಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ 80 ಮಂದಿ ನಾಪತ್ತೆಯಾಗಿದ್ದು, ಸೋಮವಾರವೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಕೆಟ್ಟ ಹವಾಮಾನದ ನಡುವೆಯೂ ರಕ್ಷಣಾ ಸಿಬ್ಬಂದಿ ಭಗ್ನಾವಶೇಷಗಳಡಿ ಸಿಲುಕಿದ ಜನರಿಗಾಗಿ ಶೋಧ ನಡೆಸುತ್ತಿದ್ದಾರೆ. ಈ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. 

ಕಳೆದ 24 ಗಂಟೆಗಳಲ್ಲಿ ಹಲವು ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸಿದೆ. ರಸ್ತೆಗಳು ಮಣ್ಣಿನಿಂದ ಆವೃತ್ತವಾಗಿವೆ.

‘ಸೋಮವಾರದ ವೇಳೆಗೆ ರಕ್ಷಣಾ ಸಿಬ್ಬಂದಿ ಸಂಖ್ಯೆ 1500ಕ್ಕೆ ಏರಿಕೆಯಾಗಿದೆ. ಈ ಕಾರ್ಯಾಚರಣೆಯಲ್ಲಿ ಇನ್ನಷ್ಟು ಸಿಬ್ಬಂದಿ ಸೇರ್ಪಡೆಯಾಗುವ ಸಾಧ್ಯತೆಗಳಿವೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಸಂತ್ರಸ್ತರನ್ನು ಆದಷ್ಟು ಬೇಗ ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ. ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಮತ್ತು ಸೇನಾ ಸಿಬ್ಬಂದಿ ತಮ್ಮ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ’ ಎಂದು ಜಪಾನ್‌ ಪ್ರಧಾನಿ ಯೋಶಿಹಿದೆ ಸುಗಾ ಹೇಳಿದರು.

36,000 ಜನರು ಇರುವ ಅಟಾಮಿ ನಗರದಲ್ಲಿ 113 ಮಂದಿ ನಾಪತ್ತೆಯಾಗಿರುವ ಸಾಧ್ಯತೆಗಳಿವೆ. ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ ಎಂಬುದಾಗಿ ವಕ್ತಾರ ಹಿರೊಕಿ ಒನುಮಾ ಅವರು ಭಾನುವಾರ ಮಾಹಿತಿ ನೀಡಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ನಾಪತ್ತೆಯಾದವರ ಸಂಖ್ಯೆ 80ಕ್ಕೆ ಇಳಿಕೆಯಾಗಿದೆ ಎಂದು ಜಪಾನ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಟಾಮಿಯಲ್ಲಿ ಶನಿವಾರ ಸಂಭವಿಸಿದ ಭೂಕುಸಿತದಲ್ಲಿ 130 ಮನೆಗಳು ಹಾನಿಗೊಳಗಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು