ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಂದೂಗಳ ಪಾತ್ರ ನಿರ್ಣಾಯಕ:ರಾಜಾ ಕೃಷ್ಣಮೂರ್ತಿ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ 20 ಲಕ್ಷ ಹಿಂದೂಗಳು ನಿರ್ಣಾಯಕ ಪಾತ್ರವಹಿಸಲಿದ್ದಾರೆ ಎಂದು ಅಮೆರಿಕದಲ್ಲಿರುವ ಭಾರತ ಸಂಜಾತ ಸಂಸದ ರಾಜಾ ಕೃಷ್ಣಮೂರ್ತಿ ಹೇಳಿದ್ದಾರೆ.
‘ಹಿಂದೂ ಅಮೆರಿಕನ್ಸ್ ಫಾರ್ ಬೈಡನ್’ ಎಂಬ ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷ್ಣಮೂರ್ತಿ ಅವರು, ನ.3 ರಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಈ ವೇಳೆ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಜೋ ಬೈಡನ್ ಮತ್ತು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರ ಪರವಾಗಿ ಮತ ಚಲಾಯಿಸಿ ಎಂದು ಅವರು ಕೋರಿದರು.
‘ವಸುದೈವ ಕುಟುಂಬಕಂ’ ಎಂಬ ಹಿಂದೂಗಳ ಪ್ರಮುಖ ಚಿಂತನೆಗಾಗಿ ಜೋ ಬೈಡನ್ ಅವರನ್ನು ಆರಿಸುವುದು ಬಹಳ ಮುಖ್ಯವಾಗಿದೆ. ಎಲ್ಲರೂ ಸಮಾನರು ಹಾಗೂ ಎಲ್ಲರನ್ನು ಗೌರವದಿಂದ ನೋಡಬೇಕು ಎಂಬ ಮೌಲ್ಯದ ಮೇಲೆ ನಮ್ಮ ನಂಬಿಕೆ ಇದೆ. ಹಾಗಾಗಿ ಬೈಡನ್ ಅವರನ್ನು ಅಧ್ಯಕ್ಷರಾಗಿ ಆರಿಸಬೇಕು’ ಎಂದು ಕೃಷ್ಣಮೂರ್ತಿ ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.