ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ 74ನೇ ಸ್ವಾತಂತ್ರ್ಯ ದಿನಾಚರಣೆಗೆ ಶುಭ ಕೋರಿದ ಅಮೆರಿಕ

Last Updated 15 ಆಗಸ್ಟ್ 2020, 7:05 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ದೇಶಗಳು ಪ್ರಜಾಪ್ರಭುತ್ವ ಸಂಪ್ರದಾಯ ಮತ್ತು ನಿಕಟ ಸ್ನೇಹ ಸಂಬಂಧಗಳನ್ನು ಹೊಂದಿವೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ ಅವರು ಶನಿವಾರ ಹೇಳಿದರು.

74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತೀಯರಿಗೆ ಶುಭಕೋರಿದ ಅವರು, ‘ಭಾರತ ಸ್ವಾತಂತ್ರ್ಯಪಡೆದ ದಿನದಿಂದಲೂ ಅಮೆರಿಕದ ಜತೆ ಸ್ನೇಹ ಹೊಂದಿದೆ.ಈ ಸಂಬಂಧವು ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವಾಗಿ ಬೆಳೆದಿದೆ. ಉಭಯ ರಾಷ್ಟ್ರಗಳು 21ನೇ ಶತಮಾನದಲ್ಲಿ ಜಾಗತಿಕ ಭದ್ರತೆ ಮತ್ತು ಸಮೃದ್ಧಿಗೆ ಪ್ರಮುಖವಾದ ವಿಷಯಗಳ ಬಗ್ಗೆ ಜಂಟಿಯಾಗಿ ಶ್ರಮಿಸಲಿವೆ’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

‘ಭಯೋತ್ಪಾದನೆ ವಿರುದ್ಧದ ಹೋರಾಟ, ರಕ್ಷಣಾ ವ್ಯವಸ್ಥೆ, ವ್ಯಾಪಾರ, ಹೂಡಿಕೆ, ಇಂಧನ, ಪರಿಸರ, ಆರೋಗ್ಯ, ಕೃಷಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಕ್ಷೇತ್ರಗಳಲ್ಲಿ ಅಭಿವೃದ್ಧಿಗಾಗಿಭಾರತ ಮತ್ತು ಅಮೆರಿಕ ದೇಶಗಳುಜೊತೆಯಾಗಿ ಕೆಲಸ ಮಾಡುತ್ತಿವೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT