ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನ, ಇರಾಕ್‌ನಲ್ಲಿ ಸೈನಿಕರ ಸಂಖ್ಯೆ ಕಡಿಮೆಗೊಳಿಸಲು ಅಮೆರಿಕ ನಿರ್ಧಾರ

Last Updated 18 ನವೆಂಬರ್ 2020, 6:27 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಮುಂದಿನ ವರ್ಷ ಜನವರಿ 15ರೊಳಗೆ ಅಫ್ಗಾನಿಸ್ತಾನ ಮತ್ತು ಇರಾಕ್‌ನಲ್ಲಿ ಅಮೆರಿಕದ ಸೈನಿಕರ ಸಂಖ್ಯೆಯನ್ನು 2,500ಕ್ಕೆ ಇಳಿಸಲಾಗುವುದು ಎಂದು ಅಮೆರಿಕ ಘೋಷಿಸಿದೆ.

ಈ ನಿರ್ಧಾರವನ್ನು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಕ್ರಿಸ್ಟೊಫರ್‌ ಸಿ ಮಿಲ್ಲರ್‌ ಅವರು ಮಂಗಳವಾರ ಪ್ರಕಟಿಸಿದರು. ಆದರೆ, ಈ ನಡೆಗೆ ವಿರೋಧ ಪಕ್ಷದ ಸದಸ್ಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಅಫ್ಗಾನಿಸ್ತಾನ ಮತ್ತು ಇರಾಕ್‌ನಲ್ಲಿ ಯುದ್ಧಗಳನ್ನು ಯಶಸ್ವಿಗೊಳಿಸಲು ಮತ್ತು ಸೇನಾ ಸಿಬ್ಬಂದಿಯನ್ನು ಮನೆಗೆ ವಾಪಸ್‌ ಕರೆತರುವ ಭರವಸೆ ನೀಡಿದ್ದರು. ಹಾಗಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಆದರೆ ಈ ನಿರ್ಧಾರಕ್ಕೆ ಡೆಮಾಕ್ರಟಿಕ್‌ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ರಿಪಬ್ಲಿಕನ್‌ ಪಕ್ಷದ ಕೆಲ ಸದಸ್ಯರು ಸಹ ಈ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುವ ಸಾಧ್ಯತೆಗಳಿಗೆ ಎಂದು ಹೇಳಿದ್ದಾರೆ.

‘ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆದೇಶದ ಮೇರೆಗೆ ಅಫ್ಗಾನಿಸ್ತಾನ ಮತ್ತು ಇರಾಕ್‌ನಲ್ಲಿ ಅಮೆರಿಕದ ಸೈನಿಕರ ಸಂಖ್ಯೆಯನ್ನು ಕಡಿಮೆಗೊಳಿಸಲಾಗುವುದು. ನಮ್ಮ ಸೈನಿಕರು ಸುರಕ್ಷಿತವಾಗಿ ಮನೆಗೆ ಹಿಂತಿರುಗಬೇಕು ಎಂಬುದು ಟ್ರಂಪ್‌ ಅವರ ಆಶಯವಾಗಿದೆ’ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್‌ ಒಬ್ರೇನ್‌ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಪ್ರಸ್ತುತ ಅಫ್ಗಾನಿಸ್ತಾನದಲ್ಲಿ ಅಮೆರಿಕದ 4,500 ಸೈನಿಕರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT