ಮಂಗಳವಾರ, ಜೂನ್ 15, 2021
22 °C

12 ವರ್ಷ ಮೇಲ್ಪಟ್ಟವರಿಗೂ ಫೈಜರ್ ಲಸಿಕೆ: ತುರ್ತು ಬಳಕೆಗೆ ಅಮೆರಿಕ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: 12 ವರ್ಷ ಮೇಲ್ಪಟ್ಟವರಿಗೆ ಫೈಜರ್–ಬಯೊಎನ್‌ಟೆಕ್ ಲಸಿಕೆಯ ತುರ್ತು ಬಳಕೆಗೆ ಅಮೆರಿಕ ಅನುಮತಿ ನೀಡಿದೆ.

12–15 ವರ್ಷ ವಯಸ್ಸಿನವರಿಗೂ ಕೋವಿಡ್ ಲಸಿಕೆ ನೀಡಲು ಅನುಮತಿ ನೀಡುವಂತೆ ಫೈಜರ್–ಬಯೊಎನ್‌ಟೆಕ್ ಅಮೆರಿಕ ಸರ್ಕಾರಕ್ಕೆ ಕಳೆದ ವಾರ ಮನವಿ ಸಲ್ಲಿಸಿತ್ತು.

ಲಸಿಕೆಯ ತುರ್ತು ಬಳಕೆಗೆ ಎಫ್‌ಡಿಎ (ಆಹಾರ ಮತ್ತು ಔಷಧ ನಿಯಂತ್ರಣ ಪ್ರಾಧಿಕಾರ) ಅನುಮತಿ ನೀಡಿದೆ. ಇದಕ್ಕಾಗಿ ಲಸಿಕೆ ಬಳಕೆಯ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಸಿಎನ್‌ಎನ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸದ್ಯ ಫೈಜರ್–ಬಯೊಎನ್‌ಟೆಕ್ ಕೋವಿಡ್‌ ಲಸಿಕೆಯನ್ನು 16 ವರ್ಷ ಮೇಲ್ಪಟ್ಟವರಿಗೆ ನೀಡಲು ಅಮೆರಿಕದಲ್ಲಿ ಅನುಮತಿ ಇದೆ.

12–15 ವರ್ಷ ವಯಸ್ಸಿನವರಿಗೂ ಲಸಿಕೆ ನೀಡಲು ಅನುಮತಿ ಕೋರಿ ಯುರೋಪ್‌ ಒಕ್ಕೂಟದ ಔಷಧ ನಿಯಂತ್ರಕರಿಗೂ ಕಂಪನಿ ಈಚೆಗೆ ಮನವಿ ಮಾಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು