ನ್ಯೂಯಾರ್ಕ್: ಅಮೆರಿಕದ ಜರ್ಸಿ ದ್ವೀಪದ ಕಟ್ಟಡವೊಂದರಲ್ಲಿ ಸ್ಫೋಟ ಸಂಭವಿಸಿದೆ. ಮೂವರು ಮೃತಪಟ್ಟು, 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.

ಶನಿವಾರ ತಡ ರಾತ್ರಿ ಅಪಾರ್ಟ್‌ಮೆಂಟ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಮೂರು ಮಹಡಿಗಳ ಈ ಕಟ್ಟಡ ಸಂಪೂರ್ಣವಾಗಿ ನಾಶವಾಗಿದ್ದು, 30ಕ್ಕೂ ಹೆಚ್ಚುಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಾಪತ್ತೆಯಾದವರ ಪತ್ತೆಗಾಗಿ ಅಗ್ನಿಶಾಮಕ ಹಾಗೂ ಪ್ರಕೃತಿ ವಿಕೋಪ ರಕ್ಷಣೆ ಪಡೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.