ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ಮುಂದಿನ 4 ವಾರಗಳಲ್ಲಿ ಕೋವಿಡ್‌ನಿಂದ 62,000 ಮಂದಿ ಸಾವು–ಸಿಡಿಸಿ

Last Updated 13 ಜನವರಿ 2022, 1:58 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಕೋವಿಡ್‌–19 ಕಾರಣಗಳಿಂದಾಗಿ ಮುಂದಿನ ನಾಲ್ಕು ವಾರಗಳಲ್ಲಿ ಸುಮಾರು 62,000ಕ್ಕೂ ಹೆಚ್ಚು ಜನರು ಸಾವಿಗೀಡಾಗುವ ಸಾಧ್ಯತೆಯಿದೆ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರ (ಸಿಡಿಸಿ) ಮುನ್ಸೂಚನೆ ನೀಡಿದೆ.

ಅಮೆರಿಕದಲ್ಲಿ ಮುಂದಿನ ನಾಲ್ಕು ವಾರಗಳಲ್ಲಿ ಕೋವಿಡ್‌ ಸಂಬಂಧಿತ ಸಾವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದ್ದು, ಫೆಬ್ರುವರಿ 5ಕ್ಕೆ ಕೊನೆಗೊಳ್ಳುವ ವಾರದಲ್ಲಿ 10,400ರಿಂದ 31,000 ಮಂದಿ ಸಾವಿಗೀಡಾಗಬಹುದು ಎಂದು ಅಂದಾಜಿಸಲಾಗಿದೆ.

ಮಂಗಳವಾರ 24 ಗಂಟೆಗಳ ಅಂತರದಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ ಸುಮಾರು 3,000 ಮಂದಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಫೆಬ್ರುವರಿಯಿಂದ ಒಂದೇ ದಿನದಲ್ಲಿ ದಾಖಲಾಗಿರುವ ಅತಿ ಹೆಚ್ಚು ಸಾವಿನ ಪ್ರಕರಣಗಳು ಇದಾಗಿದೆ ಎಂಬುದು ಸಿಡಿಸಿ ಮಾಹಿತಿಯಿಂದ ತಿಳಿದು ಬಂದಿದೆ.

ಕೋವಿಡ್‌ಗೆ ಸಂಬಂಧಿಸಿದಂತೆ ಪ್ರಸ್ತುತ ನಿತ್ಯ ಸರಾಸರಿ ಸಾವಿನ ಸಂಖ್ಯೆ 1,600ರಷ್ಟಿದೆ.

ವರ್ಡೋಮೀಟರ್‌ ವೆಬ್‌ಸೈಟ್ ಪ್ರಕಾರ, ಜನವರಿ 12ರಂದು ಅಮೆರಿಕದಲ್ಲಿ ಕೋವಿಡ್‌ ದೃಢಪಟ್ಟ 8,13,885 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ 2,268 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT