ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗನ್ ಮಸೀದಿ ಮೇಲೆ ಬಾಂಬ್ ದಾಳಿಗೆ ಅಮೆರಿಕದ ತೀವ್ರ ಖಂಡನೆ

Last Updated 9 ಅಕ್ಟೋಬರ್ 2021, 5:37 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಫ್ಗಾನಿಸ್ತಾನದ ಮಸೀದಿಯಲ್ಲಿ ಪ್ರಾರ್ಥನೆ ನಿರತ ನಾಗರಿಕರ ಮೇಲೆ ನಡೆದಿರುವ ಬಾಂಬ್‌ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಅಮೆರಿಕ, ಭವಿಷ್ಯದಲ್ಲಿ ಅಫ್ಗನ್ನರು ಭಯೋತ್ಪಾದನೆ ಮುಕ್ತ ವಾತಾವರಣದಲ್ಲಿ ಬದುಕುವಂತಾಗಬೇಕು ಎಂದು ಆಶಿಸಿದೆ.

ಈ ಕುರಿತು ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿರುವ ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ನೆಡ್‌ ಪ್ರೈಸ್, ಬಾಂಬ್ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ‘ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇವೆ‘ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ, ‘ಇದು ದೊಡ್ಡ ದುರಂತವೇ ಸರಿ. ಬಾಂಬ್ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ಸದಸ್ಯರ ನೋವಿನಲ್ಲಿ ನಾವು ಭಾಗಿಯಾಗಿದ್ದೇವೆ‘ ಎಂದು ಹೇಳಿದರು.

ಅಫ್ಗಾನಿಸ್ತಾನದ ಉತ್ತರ ಭಾಗದಲ್ಲಿರುವ ಕುಂದುಜ್‌ನಲ್ಲಿ ಶಿಯಾ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ವೇಳೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 46ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದರು.ಇಸ್ಲಾಮಿಕ್ ಸ್ಟೇಟ್‌ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಅಫ್ಗಾನಿಸ್ತಾನದಲ್ಲಿ ತಾಲಿಬಾನ್ ಹೊಸ ಸರ್ಕಾರ ರಚನೆಯಾದ ಮೇಲೆ ಇಸ್ಲಾಮಿಕ್ ಸ್ಟೇಟ್‌ ಉಗ್ರರ ಗುಂಪು, ಧಾರ್ಮಿಕ ಸಂಸ್ಥೆಗಳು ಮತ್ತು ದೇಶದ ಅಲ್ಪಸಂಖ್ಯಾತ ಶಿಯಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT