ವಾಷಿಂಗ್ಟನ್ (ಪಿಟಿಐ): ಖಾಲಿಸ್ತಾನ ಪರ ಬೆಂಬಲಿಗರು ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತದ ಕಾನ್ಸುಲೇಟ್ ಕಚೇರಿ ಮೇಲೆ ದಾಳಿ ನಡೆಸಿರುವುದನ್ನು ಅಮೆರಿಕ ಬಲವಾಗಿ ಖಂಡಿಸಿದೆ.
‘ಘಟನೆಯು ಖಂಡಿತ ಸ್ವೀಕಾರಾರ್ಹ ಅಲ್ಲವೇ ಅಲ್ಲ. ರಾಜತಾಂತ್ರಿಕ ಅಧಿಕಾರಿಗಳು ಮತ್ತು ಅಲ್ಲಿನ ಸೌಕರ್ಯಗಳ ರಕ್ಷಣೆಗೆ ನಾವು ಬದ್ಧ’ ಎಂದು ಶ್ವೇತಭವನದ ಸಂವಹನ ಕಾರ್ಯತಂತ್ರದ ರಾಷ್ಟ್ರೀಯ ಭದ್ರತಾ ಮಂಡಳಿಯ ಸಮನ್ವಯಾಧಿಕಾರಿ ಜಾನ್ ಕಿರ್ಬಿ ಅವರು ಸುದ್ದಿಗಾರರಿಗೆ ಸೋಮವಾರ ತಿಳಿಸಿದ್ದಾರೆ.
ಭಾನುವಾರ ಖಾಲಿಸ್ತಾನ ಪರ ಘೋಷಣೆ ಕೂಗುತ್ತಾ ಕಾನ್ಸುಲೇಟ್ ಕಚೇರಿಗೆ ನುಗ್ಗಿದ್ದ ಪ್ರತಿಭಟನಾಕಾರರು, ಕಚೇರಿ ಆವರಣದಲ್ಲಿ ‘ಖಾಲಿಸ್ತಾನ ಧ್ವಜ’ವನ್ನು ಹಾರಿಸಲು ಯತ್ನಿಸಿದ್ದರು. ನಂತರ ಕಬ್ಬಿಣದ ರಾಡು ಬಳಸಿ ಕಚೇರಿಯ ಬಾಗಿಲು ಮತ್ತು ಕಿಟಕಿಗಳನ್ನು ಒಡೆದಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.